ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗನವಾಡಿ ಕೇಂದ್ರಗಳಿಗೆ ಸೌಲಭ್ಯ ವಿತರಣೆ

Last Updated 17 ಫೆಬ್ರುವರಿ 2022, 4:53 IST
ಅಕ್ಷರ ಗಾತ್ರ

ಚನ್ನಪಟ್ಟಣ: ‘ಸಂಘ, ಸಂಸ್ಥೆಗಳು ಸಾಮಾಜಿಕ ಕಳಕಳಿ ಬೆಳೆಸಿಕೊಳ್ಳುವುದು ಒಳ್ಳೆಯ ಬೆಳವಣಿಗೆ’ ಎಂದು ಸಿಡಿಪಿಒ ಸಿದ್ದಲಿಂಗಯ್ಯ ಅಭಿಪ್ರಾಯಪಟ್ಟರು.

ತಾಲ್ಲೂಕಿನ ತಗಚಗೆರೆ ಗ್ರಾಮದಲ್ಲಿ ಮಂಗಳವಾರ ಕ್ರೆಡಿಟ್ ಆಕ್ಸಿಸ್ ಗ್ರಾಮೀಣ ಕೂಟದಿಂದ ನಡೆದ ಅಂಗನವಾಡಿ ಕೇಂದ್ರಗಳಿಗೆ ಮಕ್ಕಳ ಕುರ್ಚಿ ಹಾಗೂ ಇತರೆ ಸೌಲಭ್ಯ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳು, ಅಂಗನವಾಡಿ ಕೇಂದ್ರಗಳಿಗೆ ಸರ್ಕಾರದಿಂದ ಸೌಲಭ್ಯಗಳನ್ನು ನಿರೀಕ್ಷೆ ಮಾಡಬೇಕೆಂದಿಲ್ಲ. ಸಂಘ, ಸಂಸ್ಥೆಗಳು ತಮ್ಮ ಸಾಮಾಜಿಕ ಕಳಕಳಿಯಿಂದ ಇಂತಹ ಸೌಲಭ್ಯ ನೀಡಬಹುದು. ಇದರಿಂದ ಮಕ್ಕಳಿಗೆ ಕಲಿಕೆಗೆ ಉತ್ತಮ ವಾತಾವರಣ ಸೃಷ್ಟಿಸಿದಂತಾಗುತ್ತದೆ ಎಂದು ಹೇಳಿದರು.

ಕ್ರೆಡಿಟ್ ಆಕ್ಸಿಸ್ ಗ್ರಾಮೀಣ ಕೂಟವು ಅಂಗನವಾಡಿ ಕೇಂದ್ರಗಳನ್ನು ಆಯ್ಕೆ ಮಾಡಿಕೊಂಡು ಮಕ್ಕಳಿಗೆ ಕೆಲವು ಸೌಲಭ್ಯಗಳನ್ನು ನೀಡುತ್ತಿರುವುದು ಸ್ವಾಗತಾರ್ಹ. ಮುಂದಿನ ದಿನಗಳಲ್ಲಿ ತಾಲ್ಲೂಕಿನ ಇತರೇ ಅಂಗನವಾಡಿ ಕೇಂದ್ರಗಳನ್ನು ಆಯ್ಕೆ ಮಾಡಿಕೊಂಡು ಸೌಲಭ್ಯಗಳನ್ನು ನೀಡಲಿ ಎಂದು ಆಶಿಸಿದರು.

ಗ್ರಾಮೀಣ ಕೂಟದ ವಲಯ ವ್ಯವಸ್ಥಾಪಕ ಶಿವಲಿಂಗೇಗೌಡ ಮಾತನಾಡಿ, ನಮ್ಮ ಕೂಟದಿಂದ ಕೊರೊನಾ ವೇಳೆ ಫ್ರಂಟ್ ಲೈನ್ ವಾರಿಯರ್ಸ್‌ಗಳಿಗೆ ಸ್ಯಾನಿಟೈಸರ್, ಮಾಸ್ಕ್ ಸೇರಿದಂತೆ ಹಲವು ಸೌಲಭ್ಯ ನೀಡಿದ್ದೇವೆ. ಈಗ ಅಂಗನವಾಡಿಗಳಿಗೆ ಸೌಲಭ್ಯ ನೀಡುವ ಯೋಜನೆಯನ್ನು ಹಾಕಿಕೊಂಡಿದ್ದೇವೆ ಎಂದು ತಿಳಿಸಿದರು.

ಗ್ರಾಮೀಣ ಕೂಟದಿಂದ ತಗಚಗೆರೆ, ಮುನಿಯಪ್ಪನದೊಡ್ಡಿ, ಕೆಂಚಯ್ಯನದೊಡ್ಡಿ ಅಂಗನವಾಡಿ ಕೇಂದ್ರಗಳಿಗೆ ತಲಾ ಮಕ್ಕಳು ಕೂರುವ 20 ಚಿಕ್ಕ ಕುರ್ಚಿಗಳು, 2 ದೊಡ್ಡ ಕುರ್ಚಿಗಳು, ಮಕ್ಕಳು ಕುಳಿತುಕೊಳ್ಳಲು ಜಮಖಾನ ನೀಡಲಾಯಿತು. ಸಿಡಿಪಿಒ ಕಚೇರಿಯ ವ್ಯವಸ್ಥಾಪಕಿ ಸುರೇಖಾ, ಗ್ರಾಮೀಣ ಕೂಟದ ಚನ್ನಪಟ್ಟಣ ಶಾಖೆಯ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT