ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡವರಿಗೆ ಆಹಾರ ಕಿಟ್‌ ವಿತರಣೆ

Last Updated 31 ಮೇ 2021, 2:22 IST
ಅಕ್ಷರ ಗಾತ್ರ

ಕನಕಪುರ: ‘ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದು 2 ವರ್ಷ ಪೂರ್ಣಗೊಳಿಸಿದೆ. ಕೋವಿಡ್‌ ನಿಯಂತ್ರಣ ಸಂಬಂಧ ಸರ್ಕಾರ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿದೆ’ ಎಂದು ಬಿಜೆಪಿ ಎಸ್‌.ಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಮಸಾಗರ ಕೃಷ್ಣ ತಿಳಿಸಿದರು.

ತಾಲ್ಲೂಕಿನ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕೇಂದ್ರ ಸರ್ಕಾರ 2 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಹಮ್ಮಿಕೊಂಡಿದ್ದ ರೇಷನ್‌, ತರಕಾರಿ ಮತ್ತು ಕೋವಿಡ್‌ ಕಿಟ್‌ ವಿತರಣೆ ಮಾಡಿ ಅವರು ಮಾತನಾಡಿದರು.

ನರೇಂದ್ರ ಮೋದಿ ಅವರು ದೂರದೃಷ್ಟಿಯ ನಾಯಕರಾಗಿದ್ದು ಭಾರತ ದೇಶವನ್ನು ವಿಶ್ವಗುರುವಾಗಿಸಲು ಹೊರಟಿದ್ದಾರೆ. ಕೊರೊನಾದಂತಹ ಕಠಿಣ ಸಂದರ್ಭದಲ್ಲೂ ದೇಶದ 130 ಕೋಟಿ ಜನರ ಆರೋಗ್ಯ ಮತ್ತು ಹಿತ ಕಾಪಾಡುವ ನಿಟ್ಟಿನಲ್ಲಿ ಅವಿರತವಾಗಿ ಶ್ರಮಿಸುತ್ತಿದ್ದಾರೆ ಎಂದರು.

ದೇಶದ ಅಭಿವೃದ್ಧಿ ಮತ್ತು ಯುವಶಕ್ತಿಯ ಬೆಳವಣಿಗೆಗೆ ಅನೇಕ ಜನಪರ ಕಾರ್ಯಕ್ರಮ ರೂಪಿಸಿದ್ದಾರೆ. ಅವರ ಕಾರ್ಯಕ್ರಮಗಳು ದೂರದೃಷ್ಟಿ ಯಿಂದ ಕೂಡಿವೆ ಎಂದು ಹೇಳಿದರು.

ಕೊರೊನಾ ತಡೆಗಟ್ಟುವ ಹೋರಾಟದಲ್ಲಿ ಅಗತ್ಯ ಕ್ರಮಗಳೊಂದಿಗೆ ವ್ಯವಸ್ಥಿತವಾಗಿ ವ್ಯಾಕ್ಸಿನ್‌ ನೀಡಲಾಗುತ್ತಿದೆ. ಅವರ ಹೋರಾಟಕ್ಕೆ ವಿರೋಧ ಪಕ್ಷಗಳು ಸರಿಯಾದ ರೀತಿಯಲ್ಲಿ ಸಹಕಾರ ನೀಡಿದ್ದರೆ ಸೋಂಕು ಈ ಮಟ್ಟಕ್ಕೆ ಉಲ್ಬಣಿಸುತ್ತಿರಲಿಲ್ಲ. ವಿರೋಧ ಪಕ್ಷದವರ ಅಸಹಕಾರದಿಂದ ದೇಶದ ಜನತೆ ಕಷ್ಟ ಅನುಭವಿಸುವಂತಾಗಿದೆ ಎಂದು ದೂರಿದರು.

ಕಸ್ತೂರಿ ಕರ್ನಾಟಕ ರಕ್ಷಣಾ ಸೇನೆ ರಾಜ್ಯ ಘಟಕದ ಅಧ್ಯಕ್ಷ ಆಂಜನಪ್ಪ, ಬಿಜೆಪಿ ಹೋಬಳಿ ಘಟಕದ ಅಧ್ಯಕ್ಷ ಪ್ರಕಾಶ್‌, ಮುಖಂಡರಾದ ರಾಮಸಾಗರ ಶಂಕರ್‌, ಹರೀಶ್‌, ಮಂಜುನಾಥ್‌, ಜಯಶಂಕರ್‌, ಕೃಷ್ಣಪ್ಪ, ಸುರೇಶ್‌, ಕುಶ್ಮಿತ್‌ ಗೌಡ, ಮಹೇಶ್‌, ನಾಗರಾಜು, ಸುರೇಶ್‌, ನಂದೀಶ್‌ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT