ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕನಕಪುರ: ಬರ ನಿರ್ವಹಣೆ ಸಭೆ ನಡೆಸಿದ ಜಿಲ್ಲಾಧಿಕಾರಿ

Published 28 ಫೆಬ್ರುವರಿ 2024, 7:49 IST
Last Updated 28 ಫೆಬ್ರುವರಿ 2024, 7:49 IST
ಅಕ್ಷರ ಗಾತ್ರ

ಕನಕಪುರ: ನಗರದ ಯಾವುದೇ ವಾರ್ಡ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆ ದೋರದಂತೆ ಎಚ್ಚರ ವಹಿಸಿ ಕೆಲಸ ಮಾಡಬೇಕೆಂದು ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದರು.

ಇಲ್ಲಿನ ನಗರಸಭೆ ಸಭಾಂಗಣದಲ್ಲಿ ಸೋಮವಾರ ಅಧಿಕಾರಿಗಳು ಮತ್ತು ನಗರಸಭೆ ಸದಸ್ಯರಿಗೆ ಜಂಟಿಯಾಗಿ ನಡೆಸಿದ ಸಭೆಯಲ್ಲಿ ಮಾತನಾಡಿದರು.

ಬರಗಾಲ ಕಾರಣದಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರ‍ವಾಗಿ ತಲೆದೋರುವ ಸಾಧ್ಯತೆ ಇದೆ. ಇದಕ್ಕಾಗಿ ಈಗಲೇ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗೃತಿ ವಹಿಸಬೇಕಿದೆ ಎಂದು ಸಲಹೆ ನೀಡಿದರು.

ನಗರಸಭೆ ವ್ಯಾಪ್ತಿಯ 31 ವಾರ್ಡ್‌ಗಳಲ್ಲೂ ಕುಡಿಯುವ ನೀರಿನ ಅವಶ್ಯ ಮತ್ತು ಅನಿವಾರ್ಯತೆ ಎಷ್ಟಿದೆ ಎಂಬುದನ್ನು ಪರಿಶೀಲಿಸಿ ಮುಂಜಾಗೃತಿ ವಹಿಸಬೇಕಾಗಿದೆ ಎಂದರು.

ರಾಮನಗರ ಯೋಜನಾ ನಿರ್ದೇಶಕ ರಮೇಶ್‌, ನಗರಸಭೆ ಆಯುಕ್ತ ಎಂಎಸ್ ಮಹದೇವ್ ಸೇರಿದಂತೆ ನಗರಸಭೆ ಅಧಿಕಾರಿಗಳು, ನೌಕರರು ಹಾಗೂ ನಗರಸಭೆ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT