ಸೋಮವಾರ, ಸೆಪ್ಟೆಂಬರ್ 23, 2019
28 °C
ಶಾಸಕ ಡಿ.ಕೆ. ಶಿವಕುಮಾರ್ ಬಂಧನ ಖಂಡಿಸಿ ನಡೆದ ಪ್ರತಿಭಟನೆ

ಆಹ್ವಾನ ನೀಡಿದ್ದರೆ ಪ್ರತಿಭಟನೆಗೆ ಹೋಗುತ್ತಿದ್ದೆ; ಕುಮಾರಸ್ವಾಮಿ

Published:
Updated:

ರಾಮನಗರ: ‘ಶಾಸಕ ಡಿ.ಕೆ.ಶಿವಕುಮಾರ್‌  ಬಂಧನ ಖಂಡಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಗೆ ಮುಂಚೆಯೇ ಆಹ್ವಾನ ನೀಡಿದ್ದರೆ ನಾನೂ ಹೋಗುತ್ತಿದ್ದೆ’ ಎಂದು ಶಾಸಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ... ‘ಕನಕಪುರದ ಬಂಡೆ’ ಡಿ.ಕೆ.ಶಿವಕುಮಾರ್‌ಗೆ ಈಗ ಸಂಕಷ್ಟದ ಕಾಲ!

ಚನ್ನಪಟ್ಟಣದಲ್ಲಿ ಬುಧವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಜೆಡಿಎಸ್ ಕಾರ್ಯಕರ್ತರಿಗೆ ತಿಳಿಸಿದ್ದೇನೆ. ಸಂಘಟಕರು ತರಾತುರಿಯಲ್ಲಿ ಕಾರ್ಯಕ್ರಮ ನಿಗದಿ ಮಾಡಿದ್ದಾರೆ. ನನ್ನ ಗಮನಕ್ಕೆ ತಂದಿಲ್ಲ’ ಎಂದು ತಿಳಿಸಿದರು.

ಇದನ್ನೂ ಓದಿ... ಹವಾಲಾ ಎಂದರೆ ಏನು? ಹೇಗೆ ನಡೆಯುತ್ತೆ ವ್ಯವಹಾರ?

‘ಬಿಜೆಪಿಯವರು ನನ್ನನ್ನು ಪ್ರಕರಣಗಳಲ್ಲಿ ಸಿಲುಕಿಸಲು ಸಾಧ್ಯವಿಲ್ಲ. ನನ್ನ ಜೀವನದಲ್ಲಿ ನಾನೆಂದು ತಪ್ಪುಗಳಿಗೆ ಅವಕಾಶ ಕೊಟ್ಟಿಲ್ಲ’ ಎಂದರು.

Post Comments (+)