ಚನ್ನಪಟ್ಟಣ (ರಾಮನಗರ): ಪಟ್ಟಣದ ತಟ್ಟೆಕೆರೆಯಲ್ಲಿ (ಕುಡಿಯುವ ನೀರಿನ ಕಟ್ಟೆ) ₹9 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ಭೂಮಿಪೂಜೆ ನೆರವೇರಿಸಿದರು.
ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್, ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ಬೆಂಗಳೂರು - ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ರದೇಶ ಯೋಜನೆ ಪ್ರಾಧಿಕಾರದ ಅಧ್ಯಕ್ಷ ರಘುನಂದನ್ ರಾಮಣ್ಣ, ಚನ್ನಪಟ್ಟಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪ್ರಮೋದ್, ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಗ್ವಿಜಯ್ ಬೋಡ್ಕೆ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇದ್ದಾರೆ.