ಹಲಗೂರು: ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ 64ನೇ ಜನ್ಮ ದಿನದ ಪ್ರಯುಕ್ತ ಅವರ ಅಭಿಮಾನಿಗಳಿಂದ ನೂರಾರು ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು.

ಹಲಗೂರಿನ ಪ್ರಮುಖ ವೃತ್ತದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದ ಕಾರ್ಯಕ್ರಮದಲ್ಲಿ ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿದ ಅಭಿಮಾನಿಗಳು ಡಿ.ಕೆ.ಶಿವಕುಮಾರ್ ಅವರಿಗೆ ಜೈಕಾರ ಕೂಗಿ ಸಂಭ್ರಮ ವ್ಯಕ್ತಪಡಿಸಿದರು.

ಶಿವಕುಮಾರ್ ಮಾತನಾಡಿ ‘ಕೆಪಿಸಿಸಿ ಅಧ್ಯಕ್ಷರಾಗಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಡಿ.ಕೆ.ಶಿವಕುಮಾರ್ ಅವರು ಅವಿರತವಾಗಿ ಶ್ರಮಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ಬೆಂಗಳೂರು ಸರ್ವಾಂಗೀಣ ಅಭಿವೃದ್ಧಿಗಾಗಿ ‘ಬ್ರಾಂಡ್ ಬೆಂಗಳೂರು’ ಪರಿಕಲ್ಪನೆಯ ಮೂಲಕ ನಗರಕ್ಕೆ ಹೊಸ ರೂಪ ನೀಡಲು ಪಣತೊಟ್ಟಿದ್ದಾರೆ. ಜಲ ಸಂಪನ್ಮೂಲ ಸಚಿವರಾಗಿ ರಾಜ್ಯದ ರೈತರ ಹಿತದೃಷ್ಟಿಯಿಂದ ರೂಪಿಸಿದ ಹಲವು ನೀರಾವರಿ ಯೋಜನೆಗಳಲ್ಲಿ ಅವರ ಪಾತ್ರ ದೊಡ್ಡದಿದೆ. ಜನಸಾಮಾನ್ಯರ ಬಗ್ಗೆ ಅಪಾರ ಕಾಳಜಿ ಹೊಂದಿರುವ ಅವರು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಆಗಲಿ ಎಂದು’ ಆಶಯ ವ್ಯಕ್ತಪಡಿಸಿದರು.

ಡಿ.ಕೆ.ಶಿವಕುಮಾರ್ ಅಭಿಮಾನಿ ಸಂಘದ ತಾಲ್ಲೂಕು ಅಧ್ಯಕ್ಷ ಲಿಂಗಪಟ್ಟಣ ಗಂಗಾಧರ್, ಕೆಪಿಸಿಸಿ ಸದಸ್ಯೆ ಜಯಮ್ಮ, ಮುಖಂಡರಾದ ಲಿಯಾಕಿತ್ ಅಲಿ ಉರ್ಫ್ ಪಿಳ್ಳು, ಮಂಜು, ಮರಿಸ್ವಾಮಿ, ಎಚ್.ಆರ್.ಶಿವಮಾದೇಗೌಡ, ತೇಜುಕುಮಾರ್, ಬಿ.ಎನ್.ನವೀನ್, ಚಂದನ್, ಮಹದೇವ, ಚೇತನ್ ಬಾಬು, ಪುಟ್ಟೇಗೌಡ, ಶ್ರೀಕಂಠಸ್ವಾಮಿ, ರವೀಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-40-525714909

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.