ಕನಕಪುರ :ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಅವರ ಮನೆ ದೇವರಾದ ಕೆಂಕೇರಮ್ಮ ದೇವಸ್ಥಾನದಲ್ಲಿ ದೇವಾಲಯ ಸಮಿತಿಯಿಂದ ಪೂಜಾ ಕೈಂಕರ್ಯ ಜರುಗಿತು.

ಪೂಜೆ ಬಳಿಯ ಮಾತನಾಡಿದ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆರ್.ಕೃಷ್ಣಮೂರ್ತಿ, ಡಿ.ಕೆ.ಶಿವಕುಮಾರ್ ಅವರು ಕನಕಪುರ ತಾಲ್ಲೂಕನ್ನು ಸರ್ವಾಂಗೀಣ ಅಭಿವೃದ್ಧಿ ಮಾಡಿ ಮಾದರಿ ತಾಲ್ಲೂಕಾಗಿ ಮಾಡಿದ್ದಾರೆ. ಇದನ್ನು ರಾಜ್ಯ ವ್ಯಾಪ್ತಿ ವಿಸ್ತರಿಸಬೇಕೆಂಬುದು ಅವರ ಕನಸಾಗಿತ್ತು. ಸಿಎಂ ಆಗುವ ಮೂಲಕ ಅದಕ್ಕೆ ಅವಕಾಶ ದೊರೆತಿದೆ ಎಂದು ಹೇಳಿದರು.

ಶಿವಕುಮಾರ್ ಅವರು ಯಾವುದೇ ಕೆಲಸ ಮಾಡಬೇಕಾದರೆ ಶಿಸ್ತು ಮತ್ತು ಬದ್ಧತೆ ಪ್ರದರ್ಶಿಸುತ್ತಾರೆ. ಎಲ್ಲಾ ಅಭಿವೃದ್ಧಿ ಕೆಲಸ, ಹೊಸ ಯೋಜನೆಗಳನ್ನು ತಾಲ್ಲೂಕಿನಲ್ಲಿ ಪ್ರಾಯೋಗಿಕವಾಗಿ ಮಾಡಿ ಯಶಸ್ವಿಗೊಳಿಸಿದ್ದಾರೆ. ರಾಜ್ಯದ ಸಮಗ್ರ ಅಭಿವೃದ್ಧಿಗೊಳಿಸುವ ಮೂಲಕ ದೇಶಕ್ಕೆ ಮ ಮಾದರಿಯಾಗಿಸಲಿ ಎಂದು ಆಶಿಸಿದರು.

ಶಿವಕುಮಾರ್ ಯಾವುದೇ ಕೆಲಸವಾದರೂ ಛಲದಿಂದ ಮಾಡುತ್ತಾರೆ.ಜಿಲ್ಲಾ ಪಂಚಾಯಿತಿಯಿಂದ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ತಲುಪಿದ್ದಾರೆ. ಜನಪರ ಆಡಳಿತ ನೀಡಲು ಕೆಂಕೆರಮ್ಮ ಅವರಿಗೆ ಶಕ್ತಿ ಮತ್ತು ಆಯಸ್ಸು ಆರೋಗ್ಯ ನೀಡಲಿ ಪ್ರಾರ್ಥಿಸಲಾಗಿದೆ ಎಂದು ಕೆಂಕೇರಮ್ಮ ದೇವಾಲಯ ಸಮಿತಿಯ ಉಪಾಧ್ಯಕ್ಷ ರಮೇಶ್ ತಿಳಿಸಿದರು.

‘ದೇವಿಯ ಆಶೀರ್ವಾದದಿಂದ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಿದ್ದಾರೆ. ಅವರ ಆಡಳಿತವು ಮುಂದಿನ ದಿನಗಳಲ್ಲಿ ಸುಗಮವಾಗಿ ನಡೆಯಲಿ ಎಂದು ಪ್ರಾರ್ಥನೆ ಮಾಡಿದ್ದೇವೆ’ ಎಂದು ದೇವಾಲಯ ಸಮಿತಿ ಅಧ್ಯಕ್ಷ ಚಿಕ್ಕಲಿಂಗಯ್ಯ ತಿಳಿಸಿದರು.

ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿ ಆಗಿರುವುದು ತಾಲ್ಲೂಕಿನ ಜನತೆಗೆ ಅತ್ಯಂತ ಖುಷಿಯನ್ನು ನಾವೇ ಮುಖ್ಯಮಂತ್ರಿಯಾದಷ್ಟು ಸಂತೋಷವನ್ನು ತಂದಿದೆ ಎಂದರು.

ದೇವಾಲಯ ಸಮಿತಿಯ ಕಾರ್ಯದರ್ಶಿ ಮಹದೇವ್ ಖಜಾಂಚಿ ಜಯಶಂಕರ್, ಸಮಿತಿಯ ಸದಸ್ಯ ಕೃಷ್ಣಪ್ಪ, ಮುದ್ದಹನುಮಯ್ಯ, ಚಿಕ್ಕಬೈರೇಗೌಡ, ನಂಜುಂಡಪ್ಪ, ವೆಂಕಟರಮಣ, ಚನ್ನಕೇಶವ, ಶ್ರೀನಿವಾಸ್, ಟಿ.ಸುರೇಶ್, ಬೈರೇಗೌಡ, ಸಿಲ್ಕ್ ರವಿ, ನಾಗೇಶ್, ದೇವರಾಜು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-14-794837654

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.