ಚನ್ನಪಟ್ಟಣ: ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರಿಗೆ ಶುಭಕೋರಿ ತಾಲ್ಲೂಕು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಕರುಣ್ ಆನಂದ್ ತಾಲ್ಲೂಕಿನ ಮೈಲನಾಯಕನ ಹೊಸಹಳ್ಳಿ ಗ್ರಾ.ಪಂ. ವ್ಯಾಪ್ತಿಯ ನಾಲ್ಕು ಗ್ರಾಮಗಳ ಸುಮಾರು ಎರಡು ಸಾವಿರ ಮನೆಗಳಿಗೆ ಬುಧವಾರ ಸಿಹಿ ಪೊಟ್ಟಣ ಹಂಚಿಕೆ ಮಾಡಿದರು.

ಗ್ರಾಮದ ಕೊಲ್ಲಾಪುರದಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಸಿಹಿ ಪೊಟ್ಟಣ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು, ತಾಲ್ಲೂಕಿನ ಮೈಲನಾಯಕನ ಹೊಸಹಳ್ಳಿ, ಮೈಲನಾಯಕನಹಳ್ಳಿ, ಹನುಮಾಪುರದೊಡ್ಡಿ, ಹರೂರು, ತೊರೆ ಹೊಸೂರು ಗ್ರಾಮಗಳ ಮನೆಮನೆಗೆ ಹಂಚಲು ಸಿಹಿ ಪೊಟ್ಟಣಗಳನ್ನು ಆಯಾ ಗ್ರಾಮಗಳ ಮುಖಂಡರಿಗೆ ಹಸ್ತಾಂತರಿಸಿದರು.

ಈ ವೇಳೆ ಮಾತನಾಡಿದ ಅವರು, ಶಿವಕುಮಾರ್ ಅವರು ಎರಡು ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿ ರಾಜ್ಯದ ಎಲ್ಲ ವರ್ಗದ ಜನರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ನೀಡಲಿ. ಜನಪರ ಹಾಗೂ ಅಭಿವೃದ್ಧಿಪರ ಕೆಲಸಗಳನ್ನು ನೀಡಿ ಎಲ್ಲರ ವಿಶ್ವಾಸಕ್ಕೆ ಪಾತ್ರವಾಗಲಿ ಎಂದು ಹಾರೈಸಿದರು.

ತಾಲ್ಲೂಕು ಗ್ಯಾರಂಟಿ ಸಮಿತಿ ನಿರ್ದೇಶಕ ಆರ್. ರಮೇಶ್, ಮುರುಳಿ, ಶಿವರಾಮಣ್ಣ, ಸುಮ್ಮೇಗೌಡ, ದಿನೇಶ್, ಪುಟ್ಟಸ್ವಾಮಿ, ದೊಡ್ಡಯ್ಯ, ಗೋಪಾಲ್, ಶ್ರೀಕಂಠ, ಅರ್ಕೇಶ್, ಮರೀಗೌಡ, ವಿಜಿ, ಪುಟ್ಟಸ್ವಾಮಿ ಹನುಮಾಪುರದೊಡ್ಡಿ,ನವೀನ, ಪ್ರವೀಣ, ರಂಗಸ್ವಾಮಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-14-461341629

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.