ಕನಕಪುರ: ‘ಕನಕಪುರ ಕ್ಷೇತ್ರದಲ್ಲಿ ₹2 ಸಾವಿರ ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಯಾವುದೇ ಆರ್ಥಿಕ ಹೊರೆಯಾಗಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ತಾಲ್ಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕನಕಪುರದ ಎಂ.ಜಿ. ರಸ್ತೆ ವಿಸ್ತರಣೆ ಮಾಡಲಾಗಿದೆ. ಕೋಡಿಹಳ್ಳಿ, ಸಾತನೂರು, ದೊಡ್ಡಾಲಹಳ್ಳಿಯಲ್ಲೂ ಅಗಲೀಕರಣ ನಡೆದಿದೆ’ ಎಂದರು.

‘ಮೆಳೆಕೋಟೆ–ರಾಮನಗರ ರಸ್ತೆ, ಕುರುಪೇಟೆ ಸಂಗಮ ರಸ್ತೆ ಅಗಲೀಕರಣವಾಗಬೇಕಿದೆ. ಅದಕ್ಕೆ ₹100 ಕೋಟಿ ಅನುದಾನ ಬೇಕಾಗಿದೆ. ಅನುದಾನ ವ್ಯವಸ್ಥೆ ಆದ ತಕ್ಷಣ ಎರಡು ರಸ್ತೆಗಳ ಅಗಲೀಕರಣ ಮಾಡಿಸಲಾಗುವುದು’ ಎಂದು ಭರವಸೆ ನೀಡಿದರು.

‘ಬಿಜೆಪಿ ಸರ್ಕಾರದಲ್ಲಿ ಕನಕಪುರಕ್ಕೆ ವೈದ್ಯಕೀಯ ಕಾಲೇಜು ಮಂಜೂರಾಗಿತ್ತು. ಆಗಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅದನ್ನು ಚಿಕ್ಕಬಳ್ಳಾಪುರಕ್ಕೆ ತೆಗೆದುಕೊಂಡು ಹೋದರು. ಹೌಸಿಂಗ್ ಬೋರ್ಡ್ನಲ್ಲಿ ಮೆಡಿಕಲ್ ಕಾಲೇಜಿಗಾಗಿ 25 ಎಕರೆ ಜಾಗವಿದ್ದು, ಅಲ್ಲಿಯೇ ಕಾಲೇಜು ನಿರ್ಮಿಸಲಾಗುವುದು’ ಎಂದರು.

ಕಾವೇರಿ ನೀರು: ‘ಕ್ಷೇತ್ರದ ಎಲ್ಲಾ ಕೆರೆಗಳನ್ನು ತುಂಬಿಸಿದ್ದು, ಕುಡಿಯಲು ಕಾವೇರಿ ನೀರು ಸರಬರಾಜು ಮಾಡಲಾಗುವುದು. ಸಂಗಮದ ಅರಣ್ಯ ಪ್ರದೇಶದಲ್ಲಿ ಪೈಪ್ಲೈನ್ ಕಾಮಗಾರಿ ಬಾಕಿ ಉಳಿದಿದೆ. ಅಧಿಕಾರಿಗಳೊಂದಿಗೆ ಚರ್ಚಿಸಿ ಅದನ್ನು ಪೂರ್ಣಗೊಳಿಸಲಾಗುವುದು’ ಎಂದು ತಿಳಿಸಿದರು.

‘ಕ್ಷೇತ್ರದ ಜನತೆ ಎಂದಿಗೂ ನಮ್ಮನ್ನು ಕೈಬಿಟ್ಟಿಲ್ಲ. ಮುಂದೆಯೂ ಬಿಡುವುದಿಲ್ಲ. ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲೂ ನಮ್ಮ ಪಕ್ಷದ ಶಾಸಕರೇ ಇದ್ದಾರೆ. ಜಿಲ್ಲೆಯಲ್ಲಿ ಜೆಡಿಎಸ್ ಖಾಲಿಯಾಗಿದೆ. ಲೋಕಸಭೆ ಚುನಾವಣೆಯಲ್ಲಿ ದೇವೇಗೌಡರು ತಮ್ಮ ಅಳಿಯನನ್ನು ನಿಲ್ಲಿಸಿ ನಮಗೆ ತೊಂದರೆ ಕೊಟ್ಟರು. ಆದರೆ, ಪಕ್ಷದಿಂದ ಸಿ.ಪಿ. ಯೋಗೇಶ್ವರ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿ ಮಾಸ್ಟರ್ ಸ್ಟ್ರೋಕ್ ನೀಡಲಾಗಿತ್ತು ಎಂದರು.

ನೂತನವಾಗಿ ರಚನೆಯಾದ ಕಂದಾಯ ಗ್ರಾಮಗಳ ಹಕ್ಕು ಪತ್ರ ಮತ್ತು ಫಲಾನುಭವಿಗಳಿಗೆ ಇ- ಸ್ವತ್ತು ದಾಖಲೆಗಳನ್ನು ವಿತರಿಸಲಾಯಿತು. ಫಲಾನುಭವಿಗಳಿಗೆ ಮೀನು ಹಿಡಿಯುವ ಸಲಕರಣೆಗಳ ಕಿಟ್, ವಿವಿಧ
ಇಲಾಖೆಗಳ ವತಿಯಿಂದ ಸ್ಥಳೀಯ ಫಲಾನುಭವಿಗಳಿಗೆ ಟ್ಯಾಕ್ಸಿ ಹಾಗೂ
ವಿಕಲಚೇತನರಿಗೆ ದ್ವಿಚಕ್ರ ವಾಹನ ಸೇರಿದಂತೆ ವಿವಿಧ ಇಲಾಖೆಗಳ 1,122 ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು.

ಸಭೆಯಲ್ಲಿ ಹೋಬಳಿ ವ್ಯಾಪ್ತಿಯ ಜನರು ಭಾಗವಹಿಸಿ ತಮ್ಮ ಅಹವಾಲುಗಳನ್ನು ಅವರಿಗೆ ಸಲ್ಲಿಸಿದರು. ಅಹವಾಲು ಸ್ವೀಕಾರಕ್ಕೆ ಇಲಾಖಾವಾರು ಕೌಂಟರ್ ತೆರೆಯಲಾಗಿತ್ತು. ಡಿಸಿಎಂ ಅವರಿಗೆ ಅದ್ಧೂರಿ ಸ್ವಾಗತದೊಂದಿಗೆ ಮೆರವಣಿಗೆಯಲ್ಲಿ ಕರೆತರಲಾಯಿತು. ಕಾರ್ಯಕರ್ತರು ಬೃಹತ್ ಸೇಬಿನ ಹಾರವನ್ನು ಹಾಕಿ ಅಭಿಮಾನ ಮೆರೆದರು.

ರಾಮನಗರ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್, ವಿಧಾನ ಪರಿಷತ್ ಸದಸ್ಯರಾದ ಎಸ್. ರವಿ, ಸುಧಾಮ ದಾಸ್, ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ ಗೌಡ, ಉಪ ವಿಭಾಗಾಧಿಕಾರಿ ಬಿನೊಯ್, ಮಂಜುನಾಥ್, ತಾ.ಪಂ. ಇಒ ಅವಿನಾಶ್, ನಂದೀಶ್, ವಿಜಯದೇವ್, ದಿಲೀಪ್, ವಿಶ್ವನಾಥ್, ಬಸಪ್ಪ, ಮನುಚೇಗೌಡ ಹಾಗೂ ಇತರರು ಇದ್ದರು.

ನಿಮ್ಮ ಹೆಣ ಹೊರುವವನು ನಾನೇ ನಿಮ್ಮ ಪಲ್ಲಕ್ಕಿ ಹೊರುವವನೂ ನಾನೇ. ಅದೇ ರೀತಿ ನನ್ನ ಹೆಣ ಹೊರುವವರು ನೀವೇ. ನನ್ನ ಹಾಗೂ ನಿಮ್ಮ ಸಂಬಂಧ ಭಕ್ತನಿಗೂ ಭಗವಂತನಿಗೂ ಇರುವ ಸಂಬಂಧ

ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿ

ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಮುಂದಿನ ವರ್ಷದಲ್ಲಿ ಕನಕಪುರದ 10 ಸಾವಿರ ಬಡವರಿಗೆ ನಿವೇಶನ ಹಂಚಲಾಗುವುದು. ಜಿಲ್ಲೆಯ ನಾಲ್ಕು ಕ್ಷೇತ್ರದಲ್ಲಿಯೂ ನಿವೇಶನ ಹಂಚಿಕೆ ನಡೆಯಲಿದೆ

ಡಿ.ಕೆ. ಸುರೇಶ್, ಬಮೂಲ್ ಅಧ್ಯಕ್ಷ

Cut-off box - ಅದ್ದೂರಿ ಸ್ವಾಗತ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಕೋಡಿಹಳ್ಳಿ ಗ್ರಾಮ ಪಂಚಾಯಿತಿ ಮುಂಭಾಗದಿಂದ ವೇದಿಕೆ ಕಾರ್ಯಕ್ರಮದವರೆಗೆ ತೆರೆದ ವಾಹನದಲ್ಲಿ ಕಲಾತಂಡಗಳೊಂದಿಗೆ ಮೆರವಣಿಗೆಯಲ್ಲಿ ಕರೆ ತರಲಾಯಿತು. ಜೊತೆಗೆ ಬೃಹತ್ ಸೇಬಿನ ಹಾರವನ್ನು ಹಾಕಿ ಸ್ವಾಗತಿಸಿದರು.

‘ಲೋಕಸಭಾ ಚುನಾವಣೆ: ಬೆಂಗಳೂರಿನಲ್ಲೇ ನಮಗೆ ಮೋಸ’

‘ಲೋಕಸಭಾ ಚುನಾವಣೆಯಲ್ಲಿ ಸುರೇಶ್ ವಿರುದ್ಧ ದೇವೇಗೌಡರು ತಮ್ಮ ಅಳಿಯನನ್ನು ಬಿಜೆಪಿಯಿಂದ ನಿಲ್ಲಿಸಿ ಗೆಲ್ಲಿಸಿದರು. ಆ ಚುನಾವಣೆಯಲ್ಲಿ ನಮ್ಮ ಜನ ಮೋಸ ಮಾಡಿಲ್ಲ. ಬೆಂಗಳೂರಿನಲ್ಲಿ ಮೋಸ ಆಗಿದೆ. ಗ್ರಾಮೀಣ ಭಾಗದಲ್ಲಿ ನಮಗೆ ಮೋಸವಾಗಿಲ್ಲ. ಬೇರೆ ಕಡೆ ವಾಲಿರುವವರಿಗೆ ಬುದ್ಧಿ ಹೇಳಿ. ಚುನಾವಣೆ ಸಮಯದಲ್ಲಿ ಅನೇಕರು ಬಂದು ತಲೆ ಕೆಡಿಸುವ ಪ್ರಯತ್ನ ಮಾಡುತ್ತಾರೆ. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕುಮಾರಸ್ವಾಮಿ ಮಗ ನಿಖಿಲ್ ವಿರುದ್ಧ ಸುರೇಶ್ ಅವರನ್ನು ನಿಲ್ಲಿಸಬೇಕು ಎಂದು ಒತ್ತಡ ತರಲಾಯಿತು. ಆನಂತರ ಬೆಳವಣಿಗೆಯಲ್ಲಿ ಯೋಗೇಶ್ವರ್ ಕಾಂಗ್ರೆಸ್ ಸೇರಿದರು. ಸುರೇಶ್ ಅವರನ್ನು ಸೋಲಿಸಲು ಹೇಗೆ ತಂತ್ರ ಮಾಡಿದ್ದರೊ, ನಾವು ಸಹ ಅದೇ ರೀತಿ ಪ್ರತಿತಂತ್ರ ಮಾಡಿ ಯೋಗೇಶ್ವರ್ ಅವರನ್ನು ಗೆಲ್ಲಿಸಿಕೊಂಡೆವು’ ಎಂದು ಶಿವಕುಮಾರ್ ಹೇಳಿದರು.

ಡಿಸಿಎಂಗೆ ಡೆಂಗಿ: 3 ದಿನ ವಿಶ್ರಾಂತಿ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಡೆಂಗಿ ಜ್ವರದಿಂದ ಬಳಲುತ್ತಿದ್ದು, ಮೂರು ದಿನ ವಿಶ್ರಾಂತಿ ಪಡೆಯಲು ವೈದ್ಯರು ಸಲಹೆ ಮಾಡಿದ್ದಾರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಪೂರ್ವ ನಿಗದಿತ ಕಾರ್ಯಕ್ರಮ ಸೇರಿದಂತೆ ಮೂರು ದಿನ ಎಲ್ಲಾ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ. ‘ನಾಳೆಯಿಂದ ಯಾರ ಕೈಗೂ ಸಿಗುವುದಿಲ್ಲ’ ಎಂದು ಹೇಳಿದರು.

‘ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಯಾರನ್ನೂ ಭೇಟಿ ಮಾಡಲು ಸಾಧ್ಯವಾಗುವುದಿಲ್ಲ. ಅದಕ್ಕಾಗಿ ವಿಷಾದಿಸುತ್ತೇನೆ. ಯಾರೂ ತಪ್ಪು ತಿಳಿಯಬಾರದು’ ಎಂದು ಅವರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.