ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಕುಮಾರ್ ಕಟ್ಟಿಹಾಕಲು ಬಿಜೆಪಿ–ಜೆಡಿಎಸ್ ಮೈತ್ರಿ: ಸುರೇಶ್

Published 23 ಏಪ್ರಿಲ್ 2024, 5:46 IST
Last Updated 23 ಏಪ್ರಿಲ್ 2024, 5:46 IST
ಅಕ್ಷರ ಗಾತ್ರ

ಕನಕಪುರ: ‘ಉಪ ಮುಖ್ಯಮಂತ್ರಿಯಾಗಿರುವ ಡಿ.ಕೆ. ಶಿವಕುಮಾರ್ ಅವರನ್ನು ಹೇಗಾದರೂ ಮಾಡಿ ಕಟ್ಟಿ ಹಾಕಬೇಕೆಂದು ಬಿಜೆಪಿ ಹಾಗೂ ಜೆಡಿಎಸ್ ಒಂದಾಗಿವೆ. ಶಿವಕುಮಾರ್ ಅವರಿಗೆ ಕೆಟ್ಟ ಹೆಸರು ತರಲು ಷಡ್ಯಂತ್ರ ರೂಪಿಸುತ್ತಿದ್ದಾರೆ. ನಿಮ್ಮ ಆಶೀರ್ವಾದ ಇರುವವರೆಗೂ ಯಾರೇನೂ ಮಾಡಲು ಸಾಧ್ಯವಿಲ್ಲ’ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಹೇಳಿದರು.

ಪಟ್ಟಣದಲ್ಲಿ ಸೋಮವಾರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಶಿವಕುಮಾರ್ ಏಳಿಗೆ ಹಾಗೂ ಕ್ಷೇತ್ರದ ಅಭಿವೃದ್ಧಿ ಸಹಿಸಲಾಗದೆ ಅಪಪ್ರಚಾರ ಮಾಡುತ್ತಿದ್ದಾರೆ. ಕನಕಪುರದಲ್ಲಿ ಉಸಿರುಗಟ್ಟುವ ವಾತಾವರಣ ನಿರ್ಮಿಸಿದ್ದೇವೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಇಲ್ಲಿರುವ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಏನಾದರೂ ತೊಂದರೆ ಕೊಟ್ಟಿದ್ದೇವೆಯೇ ಹೇಳಲಿ’ ಎಂದು ಸವಾಲು ಹಾಕಿದರು.

‘ಕೆಲವರಿಗೆ ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಮನಗರ ಜಿಲ್ಲೆ ನೆನಪಾಗುತ್ತದೆ. ಆಗಾಗ ನೆಂಟರಂತೆ ಬಂದು ಹೋಗುತ್ತಾರೆ. ನಿಮ್ಮ ಕಷ್ಟ–ಸುಖಕ್ಕೆ ಯಾರೂ ಬರುವುದಿಲ್ಲ. ನಿಮ್ಮೊಂದಿಗೆ ಹೆಗಲು ಕೊಟ್ಟು ಯಾರಾದರೂ ನಿಂತಿದ್ದರೆ, ಅದು ನಾನು ಮತ್ತು ಶಿವಕುಮಾರ್. ರಾಜಕೀಯ ಹಿತಾಸಕ್ತಿಗಾಗಿ ಬಿಜೆಪಿ ಹಾಗೂ ಜೆಡಿಎಸ್‌ನವರು ಕನಕಪುರವನ್ನು ಕೆಟ್ಟದಾಗಿ ಬಿಂಬಿಸುತ್ತಿರುವುದನ್ನು ಒಕ್ಕೊರಲಿನಿಂದ ಖಂಡಿಸಬೇಕು’ ಎಂದು ಕರೆ ನೀಡಿದರು.

‘ನಮ್ಮ ತಾಲ್ಲೂಕಿನ ವೈದ್ಯಕೀಯ ಕಾಲೇಜು ಕಿತ್ತುಕೊಂಡು ಹೋದ ಮತ್ತು ಮೇಕೆದಾಟು ಯೋಜನೆಗೆ ಅನುಮತಿ ನೀಡದ ಬಿಜೆಪಿಯವರು ಇಂದು ಯಾವ ನೈತಿಕತೆಯಿಂದ ನಿಮ್ಮ ಮತ ಕೇಳುತ್ತಿದ್ದಾರೆ. ತಾಲ್ಲೂಕಿನ ಅಭಿವೃದ್ಧಿಗೆ ಬಿಜೆಪಿ– ಜೆಡಿಎಸ್ ಕೊಡುಗೆ ಏನು?’ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT