ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್ ಪರ ಕೂಗುವುದು ದೇಶದ್ರೋಹ: ಡಿಕೆ ಸುರೇಶ್

ಪಾಕ್ ಪರ ಘೋಷಣೆ ಕೂಗಿದ ಆರೋಪದ ಮೇಲೆ ಮೂವರನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗಿದೆ’ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದರು.
Published 6 ಮಾರ್ಚ್ 2024, 7:13 IST
Last Updated 6 ಮಾರ್ಚ್ 2024, 7:13 IST
ಅಕ್ಷರ ಗಾತ್ರ

ರಾಮನಗರ: ‘ಪಾಕಿಸ್ತಾನ ಪರವಾಗಿ ವಾದ ಮಾಡುವುದು ದೇಶದ್ರೋಹ ಮತ್ತು ಅವರ ಪರ ವಾದಿಸುವವರು ದೇಶದ್ರೋಹಿಗಳು. ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಆರೋಪದ ಮೇಲೆ ಮೂವರನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗಿದೆ’ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದರು.

ತಾಲ್ಲೂಕಿನಲ್ಲಿ ಜಾಲಮಂಗಲದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಭಾರತದಲ್ಲಿ ವಾಸ ಮಾಡುವ ಪ್ರತಿಯೊಬ್ಬರು ನಮ್ಮ ದೇಶದ ಪರವಾಗಿರಬೇಕು. ನಮ್ಮ ಸಂಸ್ಕೃತಿ, ಪರಂಪರೆಯನ್ನು ಗೌರವಿಸಬೇಕು’ ಎಂದರು.

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದರೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ನಾಯಕರು ಮೌನವಾಗಿರುವುದರ ಕುರಿತು ಪ್ರತಿಕ್ರಿಯಿಸಿದ ಅವರು, ‘ಅವರು ಹೇಗಾದರೂ ಇರಲಿ. ಯಾರೂ ಸ್ಪರ್ಧೆ ಮಾಡ್ತಾರೆಂಬುದು ಸಹ ನನಗೆ ಮುಖ್ಯವಲ್ಲ. ನನಗೆ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡಿದ್ದೇನೆ’ ಎಂದು ತಿಳಿಸಿದರು.

‘ನನ್ನ ಕೆಲಸ ನೋಡಿ ಜನ ಬೆಂಬಲ ಕೊಡುತ್ತಾರೆಂಬ ನಂಬಿಕೆ ಇದೆ. ನನ್ನ ಗಮನ ಕೆಲಸದ ಮೇಲೆಯೇ ಹೊರತು, ಬೇರೆ ವಿಚಾರಗಳ ಕುರಿತು ನಾನು ಗಮನ ಹರಿಸುವುದಿಲ್ಲ. ಬೇರೆಯವರು ಮಾತನಾಡಿದರೆ ಅದಕ್ಕೆ ಉತ್ತರ ಕೊಡುವ ತಾಳ್ಮೆಯೂ ಇಲ್ಲ. ಅದರ ಅವಶ್ಯಕತೆಯೂ ನನಗಿಲ್ಲ. ಎಲ್ಲದಕ್ಕೂ ಜನರೇ ಉತ್ತರ ಕೊಡುತ್ತಾರೆ’ ಎಂದರು.

ರಾಜಕೀಯ ಚರ್ಚೆ ಇಲ್ಲ: ‘ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಅವರು ಬೆಂಗಳೂರು –ಮೈಸೂರು ಇನ್ಪ್ರಾಸ್ಟ್ರಕ್ಚರ್ ಕಾರಿಡಾರ್ ಪ್ರದೇಶ ಯೋಜನೆ ಪ್ರಾಧಿಕಾರದ ಅಧ್ಯಕ್ಷ ರಘುನಂದನ್ ರಾಮಣ್ಣ ಅವರ ಅಧಿಕಾರ ಸ್ವೀಕಾರ ಸಮಾರಂಬಕ್ಕೆ ಬಂದಿದ್ದರು. ಒಟ್ಟಿಗೆ ಫೋಟೊದಲ್ಲಿ ನಿಂತಿದ್ದರು ಅಷ್ಟೇ. ಅವರೊಂದಿಗೆ ರಾಜಕೀಯವಾಗಿ ಯಾವುದೇ ಚರ್ಚೆ ನಡೆಸಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಸುರೇಶ್ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT