ಬುಧವಾರ, ಸೆಪ್ಟೆಂಬರ್ 23, 2020
27 °C

ಶ್ರೀರಾಮ ಬಿಜೆಪಿಯ ಸ್ವತ್ತಲ್ಲ, ದೇಶದ 130 ಕೋಟಿ ಜನರ ಆಸ್ತಿ: ಡಿ.ಕೆ.ಸುರೇಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಶ್ರೀರಾಮ ಬಿಜೆಪಿಯ ಸ್ವತ್ತಲ್ಲ. ದೇಶದ 130 ಕೋಟಿ ಜನರ ಆಸ್ತಿ ಎಂದು ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದರು.

ಬಸವನಪುರ ಗ್ರಾಮದಲ್ಲಿ ಗುರುವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ಶ್ರೀರಾಮ ಕೇವಲ ಬಿಜೆಪಿಗೆ ಮಾತ್ರ ಸೀಮಿತವಲ್ಲ. ರಾಮಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರಿಗೆ ಆಹ್ವಾನ ನೀಡದಿರುವುದು ಬಿಜೆಪಿಯ ಮನಸ್ಥಿತಿಯನ್ನು ತೋರುತ್ತದೆ’ ಎಂದು ದೂರಿದರು.

ರಾಮಮಂದಿರ ಕಾರ್ಯಕ್ರಮವನ್ನು ಬಿಜೆಪಿ ಸ್ವಾರ್ಥಕ್ಕೆ ಬಳಸಿಕೊಂಡಿದೆ. ತಮಗೆ ಮಾತ್ರವೇ ಸೀಮಿತಗೊಳಿಸುವ ಮೂಲಕ ಸರ್ವಾಧಿಕಾರ, ಸಾರ್ವಭೌಮತ್ವ ಪಡೆಯಲು ಯತ್ನಿಸುತ್ತಿದೆ. ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋದರಷ್ಟೇ ಅಖಂಡ ಭಾರತ ನಿರ್ಮಿಸಲು ಸಾಧ್ಯ ಎಂದರು.

ನಿರ್ಲಕ್ಷ್ಯ: ರಾಜ್ಯದಲ್ಲಿನ ಪ್ರವಾಹದ ಬಗ್ಗೆ ಹವಮಾನ ಇಲಾಖೆ ಒಂದು ತಿಂಗಳ ಹಿಂದೆಯೇ ಮುನ್ನೆಚ್ಚರಿಕೆ ನೀಡಿತ್ತು. ಆದಾಗ್ಯೂ ರಾಜ್ಯ ಸರ್ಕಾರ ಯಾವ ತಯಾರಿಯನ್ನೂ ನಡೆಸದೇ ನಿರ್ಲಕ್ಷ್ಯ ವಹಿಸಿತು. ಇದರಿಂದಾಗಿ ಜನರು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅವರು ಟೀಕಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು