ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಣ್ಣಿನ ಆರೋಗ್ಯ ನಿರ್ಲಕ್ಷ್ಯ ಬೇಡ

Last Updated 19 ಸೆಪ್ಟೆಂಬರ್ 2021, 5:08 IST
ಅಕ್ಷರ ಗಾತ್ರ

ಚನ್ನಪಟ್ಟಣ: ದೇಹದ ಸೂಕ್ಷ್ಮ ಅಂಗವಾದ ಕಣ್ಣಿನ ಬಗ್ಗೆ ಪ್ರತಿಯೊಬ್ಬರು ಎಚ್ಚರಿಕೆ ತೆಗೆದುಕೊಳ್ಳುವುದು ಅವಶ್ಯಕತೆಯಾಗಿದೆ ಎಂದು ಬೆಂಗಳೂರಿನ ಮಿಂಟೋ ಕಣ್ಣಿನ ಅಸ್ಪತ್ರೆಯ ನೇತ್ರ ವೈದ್ಯೆ ಡಾ.ಸವಿತಾ ಅಭಿಪ್ರಾಯಪಟ್ಟರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಸಭಾಂಗಣದಲ್ಲಿ ಶುಕ್ರವಾರ ಮಧುಮೇಹಿ ರೋಗಿಗಳಿಗೆ ಹಾಗೂ ಸಾರ್ವಜನಿಕರಿಗೆ ಹಮ್ಮಿಕೊಂಡಿದ್ದ ಉಚಿತ ಕಣ್ಣಿನ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ಕಣ್ಣಿಗೆ ಯಾವುದೇ ರೀತಿಯಲ್ಲಿ ತೊಂದರೆ ಉಂಟಾದರೆ ತಕ್ಷಣ ಸ್ಥಳೀಯ ಆಸ್ಪತ್ರೆಯಲ್ಲಿರುವ ಕಣ್ಣಿನ ವೈದ್ಯರ ಬಳಿ ತಪಾಸಣೆ ಮಾಡಿಕೊಂಡು ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಮನುಷ್ಯನಿಗೆ ವಯಸ್ಸಾದಂತೆ ಕಣ್ಣಿನ ದೃಷ್ಟಿ ಕ್ಷೀಣಿಸುವುದು ಸಹಜ. ಮಧುಮೇಹ ರೋಗಗಳಿಗಂತೂ ದೃಷ್ಟಿ ಮಂದವಾಗುತ್ತಾ ಹೋಗುತ್ತದೆ. ಅವರು ತಮ್ಮ ಆರೋಗ್ಯದ ಮೇಲೆ ನಿಗಾವಹಿಸಬೇಕು. ಮಧುಮೇಹಿಗಳು ತಮ್ಮ ಆರೋಗ್ಯ ಸ್ಥಿತಿಯನ್ನು ನಿಯಂತ್ರಣದಲ್ಲಿಟ್ಟುಕೊಂಡರೆ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದರು.

ಆಸ್ಪತ್ರೆಯ ಹಿರಿಯ ಫಾರ್ಮಸಿಸ್ಟ್ ಅಧಿಕಾರಿ ಎಂ. ವೇದಮೂರ್ತಿ, ಸಾರ್ವಜನಿಕ ಆಸ್ಪತ್ರೆಯ ಶೂಷ್ರೂಷಕಿಯರ ಅಧೀಕ್ಷಕಿ ಸರಸ್ವತಿ, ನೇತ್ರಾಧಿಕಾರಿ ದೇವರಾಜು, ಮಿಂಟೋ ಕಣ್ಣಿನ ಆಸ್ಪತ್ರೆಯ ವೈದ್ಯರಾದ ಡಾ.ಸುರಬಿ, ಶುಭಾಂಗಿ, ಆರೋಗ್ಯ ಶಿಕ್ಷಣಾಧಿಕಾರಿ ಜಯಶ್ರೀ, ಸಿಬ್ಬಂದಿಯಾದ ಶಿವಾನಿ, ಸಚಿನ್ ಹಾಜರಿದ್ದರು.

ಲಯನ್ಸ್ ಕ್ಲಬ್ ಬೆಂಗಳೂರು ಉತ್ತರ, ಲಯನ್ಸ್ ಕ್ಲಬ್ ಬೆಂಗಳೂರು, ಉತ್ತರ ಚಾರಿಟಬಲ್ ಟ್ರಸ್ಟ್, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ, ಮಿಂಟೋ ಕಣ್ಣಿನ ಆಸ್ಪತ್ರೆ, ಜಿಲ್ಲಾ ಸಂಚಾರಿ ನೇತ್ರ ಚಿಕಿತ್ಸಾ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಆಸ್ಪತ್ರೆಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT