ಮಾಗಡಿ: ಶಾಸಕ ಬಾಲಕೃಷ್ಣ ಅವರು ಕೆಂಪೇಗೌಡರ ಕುಟುಂಬಕ್ಕೆ ನ್ಯಾಯ ಕೊಡಿಸುವುದಾದರೆ ಚಂದ್ರಮ್ಮ ಕೆಂಪೇಗೌಡ ಅವರನ್ನು ಬಮೂಲ್ ನಿರ್ದೇಶಕ ಸ್ಥಾನಕ್ಕೆ ಅವಿರೋಧ ಆಯ್ಕೆ ಮಾಡುವಂತೆ ಮಾಜಿ ಶಾಸಕ ಎ.ಮಂಜುನಾಥ್ ಸವಾಲು ಹಾಕಿದರು.

ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ನಡೆದ ಜೆಡಿಎಸ್–ಬಿಜೆಪಿ ಬೆಂಬಲಿತ ಅಭ್ಯರ್ಥಿ ಚಂದ್ರಮ್ಮ ಕೆಂಪೇಗೌಡ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಶಾಸಕ ಸಹೋದರ ಎಚ್.ಎನ್.ಅಶೋಕ್ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ, ಒಕ್ಕಲಿಗ ಸಂಘದ ನಿರ್ದೇಶಕರಾಗಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾಗಿ, ಹಾಲಿನ ಡೇರಿ ಅಧ್ಯಕ್ಷರಾಗಿ, ಈಗ ಬಮೂಲ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತಿದ್ದಾರೆ. ಇವರ ಕುಟುಂಬಕ್ಕೆ ಎಲ್ಲ ಅಧಿಕಾರ ಬೇಕಾ ಎಂದು ಪ್ರಶ್ನಿಸಿದರು.

ಅಧಿಕಾರ ದುರುಪಯೋಗ:

ಬಮೂಲ್ನಲ್ಲಿ ಶಾಸಕ ಬಾಲಕೃಷ್ಣ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಅಧಿಕಾರ ಹಿಡಿಯಲು ಹೊರಟಿದ್ದಾರೆ ಎಂದು ದೂರಿದರು.

ಬಿಜೆಪಿ ಯುವ ಮುಖಂಡ ಪ್ರಸಾದ್ ಗೌಡ ಮಾತನಾಡಿ, ಪಕ್ಷದ ಬೆಂಬಲಿತ ಅಭ್ಯರ್ಥಿ ಚಂದ್ರಮ್ಮ ಕೆಂಪೇಗೌಡರ ಪರ ಮತಯಾಚನೆ ಮಾಡಿದರು.

ಜೆಡಿಎಸ್ ಮುಖಂಡರಾದ ಏಳಿಗೆಹಳ್ಳಿ ತಮ್ಮಣ್ಣಗೌಡ, ಜುಟ್ಟನಹಳ್ಳಿ ಜಯರಾಂ, ಕೆಂಪೇಗೌಡ ಬೋರ್ ವೆಲ್ ನರಸಿಂಹಯ್ಯ, ಗ್ರಾ.ಪಂ.ಸದಸ್ಯ ಗುಡೇಮಾರನಹಳ್ಳಿ ನಾಗರಾಜು, ಶಿವರಾಂ, ರಂಗಸ್ವಾಮಿ, ವೀರಭದ್ರಯ್ಯ, ಪಂಚೆ ರಾಮಣ್ಣ ಕೆಂಪಸಾಗರ ಮಂಜುನಾಥ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.