ರಾಮನಗರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಐದು ತಿಂಗಳ ಗರ್ಭಿಣಿಯೊಬ್ಬರು ಮೈಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ಗುರುವಾರ ನಡೆದಿದೆ.

ನಯನ(19) ಮೃತರು. ಐದು ತಿಂಗಳ ಗರ್ಭಿಣಿಯಾಗಿದ್ದ ನಯನ ಅವರು ಒಂಬತ್ತು ತಿಂಗಳ ಹಿಂದೆಯಷ್ಟೆ ಸುನೀಲ್ ಎಂಬುವರನ್ನು ಮದುವೆಯಾಗಿದ್ದರು.

ಕೆಲ ವಾರಗಳಿಂದ ಕುಟುಂಬದಲ್ಲಿ ಕಲಹ ತಲೆದೋರಿತ್ತು. ಇದೇ ಕಾರಣಕ್ಕೆ ಬೇಸತ್ತ ನಯನ ಅವರು ಬುಧವಾರ ರಾತ್ರಿ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು. ಕೂಡಲೇ ಕುಟುಂಬದವರು ಬೆಂಕಿ ನಂದಿಸಿ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದರು.

ಆದರೆ, ಹೆಚ್ಚಿನ ಪ್ರಮಾಣದಲ್ಲಿ ಸುಟ್ಟ ಗಾಯಗಳಾಗಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದೆ ಬೆಳಿಗ್ಗೆ ಕೊನೆಯುಸಿರೆಳೆದರು. ಘಟನೆಗೆ ಸಂಬಂಧಿಸಿದಂತೆ ನಯನ ಅವರ ಕುಟುಂಬದವರು ಸುನೀಲ್ ಹಾಗೂ ಅವರ ತಂದೆ-ತಾಯಿ ವಿರುದ್ಧ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.