ಸೋಮವಾರ, 29 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಗಡಿ: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

Last Updated 16 ಏಪ್ರಿಲ್ 2022, 4:51 IST
ಅಕ್ಷರ ಗಾತ್ರ

ಮಾಗಡಿ: ಸೋಲೂರು ಹೋಬಳಿಯ ಕಂಬದಕಲ್ಲು-ಮೊಲದಕೋಟೆ ಗ್ರಾಮದ ಸಂಪರ್ಕ ರಸ್ತೆಯನ್ನು ₹ 25 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ನೆಲಮಂಗಲ ಕ್ಷೇತ್ರದ ಶಾಸಕ ಡಾ.ಶ್ರೀನಿವಾಸಮೂರ್ತಿ ತಿಳಿಸಿದರು.

ಕಂಬದಕಲ್ಲು ಗ್ರಾಮದಲ್ಲಿ ಶುಕ್ರವಾರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಮಳೆಗಾಲದ ವೇಳೆ ರಸ್ತೆಗಳು ಹದಗೆಡದಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಗಮನಹರಿಸಬೇಕು. ರಸ್ತೆಯ ಮೇಲೆ ಬಿದ್ದ ಮಳೆ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಂಡರೆ ಹಾಳಾಗುವುದಿಲ್ಲ. ರಸ್ತೆ ಅಭಿವೃದ್ಧಿ ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳಲು ಗ್ರಾಮಸ್ಥರು ನಿಗಾವಹಿಸಬೇಕು ಎಂದು ಸಲಹೆ ನೀಡಿದರು.

ಜಿ.ಪಂ. ಮಾಜಿ ಸದಸ್ಯೆ ನಾಜಿಯಾ ಖಾನಂ, ಪಿಎಲ್‌ಡಿ ಬ್ಯಾಂಕ್‌ ನಿರ್ದೇಶಕ ಎನ್‌. ಗಂಗರಾಜು ಹಾಗೂ ಗ್ರಾಮಸ್ಥರು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT