ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

26ಕ್ಕೆ ತಾಲ್ಲೂಕು ಮಟ್ಟದ ಆರೋಗ್ಯ ಮೇಳಕ್ಕೆ ಚಾಲನೆ

Last Updated 24 ಏಪ್ರಿಲ್ 2022, 7:22 IST
ಅಕ್ಷರ ಗಾತ್ರ

ಮಾಗಡಿ: ತಾಲ್ಲೂಕಿನ ಕುದೂರು ಗ್ರಾಮದ ಮಹಂತೇಶ್ವರ ಪ್ರೌಢಶಾಲಾಆವರಣದಲ್ಲಿ ಏ. 26ರಂದು ಬೆಳಿಗ್ಗೆ 9ರಿಂದ ಸಂಜೆ 4.30ರವರೆಗೆ ತಾಲ್ಲೂಕು ಮಟ್ಟದ ಉಚಿತ ಆರೋಗ್ಯ ಮೇಳ ನಡೆಯಲಿದೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಚಂದ್ರಶೇಖರ್‌ ತಿಳಿಸಿದರು.

ತಾಲ್ಲೂಕು ವೈದ್ಯಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಮೇಳಕ್ಕೆ ಆಗಮಿಸುವ ಸಾರ್ವಜನಿಕರು ಈ ಹಿಂದೆ ಚಿಕಿತ್ಸೆ ಪಡೆದ ವೈದ್ಯರ ಸಲಹಾ ಚೀಟಿ, ದಾಖಲಾತಿ, ಆಧಾರ್‌ ಕಾರ್ಡ್‌, ರೇಷನ್‌ ಕಾರ್ಡ್‌ ಮತ್ತು ಮೊಬೈಲ್‌ ತರಬೇಕು ಎಂದು ಹೇಳಿದರು.

ವಿವಿಧ ರೋಗಗಳಿಂದ ಬಳಲುವವರಿಗೆ ತಪಾಸಣೆ ನಡೆಸಲಾಗುವುದು. ಇ–ಸಂಜೀವಿನಿ ಮೂಲಕ ತಜ್ಞ ವೈದ್ಯರ ಸಂಪರ್ಕ ಕಲ್ಪಿಸಲಾಗುವುದು. ಆಯುಷ್ಮಾನ್‌ ಭಾರತ ಆರೋಗ್ಯ ಕರ್ನಾಟಕ ಕಾರ್ಡ್‌ ವಿತರಣೆ ಮಾಡಲಾಗುತ್ತದೆ. ಆರೋಗ್ಯ ಐಡಿ ಕಾರ್ಡ್‌ ವಿತರಿಸಲಾಗುವುದು ಎಂದು ತಿಳಿಸಿದರು.

ಶಾಸಕ ಎ. ಮಂಜುನಾಥ್‌ ಶಿಬಿರಕ್ಕೆ ಚಾಲನೆ ನೀಡಲಿದ್ದಾರೆ. ತಾಲ್ಲೂಕಿನ ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT