ಮಾಗಡಿ: ಫೆ.26 ರಂದು ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಹಳ್ಳಿ ರಸ್ತೆ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಪಟ್ಟಣದ ತಿರುಮಲೆಯ ಮಾದೇಶ, ಪಟ್ಟಣದ ಜುನೇದ್ ಮಾದಕ ವಸ್ತು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದರು. ಪೊಲೀಸರು ದಾಳಿ ನಡೆಸಿ ಒಟ್ಟು 250 ಗ್ರಾಂ ತೂಕದ ಮಾದಕ ವಸ್ತುವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಇನ್ಸ್ಪೆಕ್ಟರ್ ಮನೋಜ್ ತಿಳಿಸಿದ್ದಾರೆ.