ರಾಮನಗರ: ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಅಂಗವಾಗಿ ಮುಸ್ಲಿಮರು ನಗರದಲ್ಲಿ ಸೋಮವಾರ ಈದ್ ಮಿಲಾದ್ ಹಬ್ಬವನ್ನು ಶ್ರದ್ಧಾಭಕ್ತಿ ಹಾಗೂ ಸಡಗರಿಂದ ಆಚರಿಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಿ ಗಮನ ಸೆಳೆದರು. ಹಬ್ಬದ ಪ್ರಯುಕ್ತ ನಗರದಲ್ಲಿರುವ ದರ್ಗಾ ಹಾಗೂ ಮಸೀದಿಗಳನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿತ್ತು.

ಹಬ್ಬದ ಪ್ರಯುಕ್ತ ಚಿಣ್ಣರಾದಿಯಾಗಿ ಎಲ್ಲರೂ ಹೊಸ ಬಟ್ಟೆಗಳನ್ನು ಧರಿಸಿ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ತಮ್ಮ ಬಂಧು–ಬಾಂಧವರು ಹಾಗೂ ಸ್ನೇಹಿತರೊಂದಿಗೆ ಮಸೀದಿ ಮತ್ತು ದರ್ಗಾ ಬಳಿ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಹಬ್ಬದ ಶುಭಾಶಯಗಳನ್ನು ಕೋರುವಂತಹ ಪ್ಲೆಕ್ಸ್ಗಳು ಅಲ್ಲಲ್ಲಿ ಕಂಡುಬಂದವು.

ನಗರದ ಬೀದಿಗಳಲ್ಲಿ ನಡೆದ ಮೆರವಣಿಗೆಯಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು. ನಗರದ ಜಾಮಿಯಾ ಮಸೀದಿಯಿಂದ ಆರಂಭಗೊಂಡ ಮೆರವಣಿಗೆ ನಾಲಬಂದವಾಡಿ, ಮೋತಿನಗರ, ಮೊಹಬೂಬ್ ನಗರ, ಟಿಪ್ಪು ನಗರ ಮಾರ್ಗವಾಗಿ ವಾಟರ್ ಟ್ಯಾಂಕ್ ವೃತ್ತ ತಲುಪಿ, ಶೆಟ್ಟಿಹಳ್ಳಿ ರಸ್ತೆ ಮೂಲಕ ಮಸೀದಿವರೆಗೆ ತೆರಳಿತು. ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಸೇರಿದಂತೆ ಸಮುದಾಯದ ಮುಖಂಡರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಮೆರವಣಿಗೆಯುದ್ದಕ್ಕೂ ಘೋಷಣೆಗಳು ಮೊಳಗಿದವು. ಯುವಜನರು ಧ್ವಜಗಳನ್ನು ಹಿಡಿದು ಸಾಗಿಸಿದರು. ಮೆರವಣಿಗೆಯಲ್ಲಿ ಭಾಗವಹಿಸಿದ್ದವರಿಗೆ ಸ್ಥಳೀಯ ಸಂಘ–ಸಂಸ್ಥೆಗಳ ಪದಾಧಿಕಾರಿಗಳು ಕುಡಿಯುವ ನೀರು ಒದಗಿಸಿದರು. ಜನರು ರಸ್ತೆಯ ಅಕ್ಕಪಕ್ಕ ನಿಂತು ಮೆರವಣಿಗೆಯನ್ನು ಕಣ್ತುಂಬಿಕೊಂಡರು. ನೂರಾರು ಜನರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.