ಕನಕಪುರ (ರಾಮನಗರ): ಇಲ್ಲಿನ ತಾಲ್ಲೂಕು ಕಚೇರಿಯ ಚುನಾವಣೆ ಶಾಖೆಯ ಸಿಬ್ಬಂದಿ ಸುರೇಶ್ (50) ಅವರು, ತಮ್ಮ ಕಚೇರಿಯಲ್ಲೇ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಧ್ಯಾಹ್ನ ಊಟ ಮುಗಿಸಿಕೊಂಡು ಕಚೇರಿಗೆ ಬಂದಿರುವ ಸುರೇಶ್, ಮತಯಂತ್ರಗಳನ್ನು ಇಡುವ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಧ್ಯಾಹ್ನದಿಂದ ಕಚೇರಿಯಲ್ಲಿ ಸುರೇಶ್ ಅವರು ಕಾಣದಿದ್ದಾಗ ಸಿಬ್ಬಂದಿ ಕೊಠಡಿಯ ಬಾಗಿಲು ತೆರೆದು ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಕನಕಪುರ ಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶವವನ್ನು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬದವರಿಗೆ ಹಸ್ತಾಂತರಿಸಲಾಗುವುದು. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಘಟನೆ ಕುರಿತು ಕುಟುಂಬದವರು ನೀಡುವ ದೂರಿನ ಮೇರೆಗೆ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.