ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವೇಶ್ವರಾಯ ಬ್ಯಾಂಕ್‌ಗೆ ಫೆ.4ಕ್ಕೆ ಚುನಾವಣೆ

Published 19 ಜನವರಿ 2024, 14:15 IST
Last Updated 19 ಜನವರಿ 2024, 14:15 IST
ಅಕ್ಷರ ಗಾತ್ರ

ಕನಕಪುರ: ನಗರದ ಸರ್.ಎಂ.ವಿಶ್ವೇಶ್ವರಾಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರ ಆಯ್ಕೆಗೆ ಫೆ.4 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾಧಿಕಾರಿ ಮಂಜುನಾಥ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಸ್ತುತ ಆಡಳಿತ ಮಂಡಳಿಯ ಅವಧಿ ಮುಕ್ತಾಯವಾಗಿದ್ದು, ಆಡಳಿತ ಮಂಡಳಿಗೆ ಚುನಾವಣೆ ನಿಗದಿಯಾಗಿದೆ. ಚುನಾವಣೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಜ.25 ರಿಂದ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಸೊಸೈಟಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದಾಗಿದೆ.

ನಾಮಪತ್ರ ಸಲ್ಲಿಕೆಗೆ ಜ.28 ಕೊನೆಯ ದಿನಾಂಕ. ಜ.29ಕ್ಕೆ ನಾಮಪತ್ರ ಪರಿಶೀಲನೆ, ಜ.30ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಜ.30 ರಂದು ಕಣದಲ್ಲಿರುವ ಸ್ಪರ್ಧಾಳುಗಳ ಪಟ್ಟಿ ಬಿಡುಗಡೆ ಮಾಡಲಾಗುವುದು.

ಫೆ.4 ರಂದು ಬಾಲಕಿಯರ ಪ್ರೌಡಶಾಲೆಯಲ್ಲಿ (ಆರ್‌ಜಿಎಚ್‌ಎಸ್‌) ಚುನಾವಣೆ ನಡೆಯಲಿದೆ. ಚುನಾವಣೆ ನಂತರ ಅಂದೇ ಮತ ಏಣಿಕೆ ನಡೆಸಿ ಫಲಿತಾಂಶ ಪ್ರಕಟಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT