ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ವೀಕ್ಷಕ ಕಟಿಯಾಲ್‌ ಕನಕಪುರಕ್ಕೆ ಭೇಟಿ, ಪರಿಶೀಲನೆ

Published 12 ಏಪ್ರಿಲ್ 2024, 5:42 IST
Last Updated 12 ಏಪ್ರಿಲ್ 2024, 5:42 IST
ಅಕ್ಷರ ಗಾತ್ರ

ಕನಕಪುರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣಾ ವೀಕ್ಷಕ ಕಟಿಯಾಲ್ ಬುಧವಾರ ಕನಕಪುರ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಉತ್ತರ ಪ್ರದೇಶದ ಐಪಿಎಸ್ ಅಧಿಕಾರಿಯಾಗಿರುವ ಇವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಪೊಲೀಸ್ ವೀಕ್ಷಕರಾಗಿ ನೇಮಕಗೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಹೈವೋಲ್ಟೇಜ್‌ ಕ್ಷೇತ್ರವಾಗಿ ರಾಜ್ಯದ ಗಮನ ಸೆಳೆದಿದೆ.

ಅತಿಸೂಕ್ಷ್ಮ ಮತಗಟ್ಟೆಗಳಾದ ನಾರಾಯಣಪುರ, ಬಿ.ಎಸ್.ದೊಡ್ಡಿ, ಹಲಸೂರು ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕನಕಪುರ ತಹಶೀಲ್ದಾರ್ ಡಾ.ಸ್ಮಿತಾ ರಾಮ್, ನೋಡಲ್ ಅಧಿಕಾರಿ ಸರ್ಕಲ್ ಇನ್‌ಸ್ಪೆಕ್ಟರ್ ಕೃಷ್ಣ ಹಾಗೂ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳ ತಂಡ ಪರಿಶೀಲನೆ ವೇಳೆ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT