ಮಂಗಳವಾರ, ಜೂನ್ 28, 2022
20 °C

ವಿದ್ಯುತ್‌ ಚಿತಾಗಾರ ನಿರ್ಮಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಪುರ: ಇಲ್ಲಿನ ಕುರುಪೇಟೆ ಬಳಿ ನಿರ್ಮಾಣ ಮಾಡುತ್ತಿರುವ ಹೈಟೆಕ್‌ ವಿದ್ಯುತ್‌ ಚಿತಾಗಾರದ ಕಾಮಗಾರಿ
ಯನ್ನು ಶಾಸಕ ಡಿ.ಕೆ.ಶಿವಕುಮಾರ್‌ ಮತ್ತು ಸಂಸದ ಡಿ.ಕೆ.ಸುರೇಶ್‌ ಮಂಗಳವಾರ ವೀಕ್ಷಣೆ ಮಾಡಿದರು.

ಬಹುದಿನಗಳಿಂದ ಚಿತಾಗಾರದ ಕಾಮಗಾರಿ ನಡೆಯುತ್ತಿದ್ದು ಈಗ ಮುಕ್ತಾಯ ಹಂತ ತಲುಪಿದೆ. ಸಾರ್ವಜನಿಕವಾಗಿ ಬಳಕೆಗೆ ಕೊಡಬೇಕಿರುವುದರಿಂದ ಚಿತಾಗಾರದಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು.

ಡಿ.ಕೆ. ಶಿವಕುಮಾರ್‌ ಮಾತನಾಡಿ, ‘ರಾಜ್ಯದಲ್ಲಿಯೇ ಹೈಟೆಕ್‌ ಮಾದರಿಯಲ್ಲಿ ಚಿತಾಗಾರವನ್ನು ಇಲ್ಲಿ ನಿರ್ಮಿಸಲಾಗಿದೆ. ಎಲ್ಲ ಧರ್ಮದವರಿಗೂ ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಶವ ಸಂಸ್ಕಾರಕ್ಕೆ ಬರುವ ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕವಾದ ಶೌಚಾಲಯ ಮತ್ತು ಸ್ನಾನ ಗೃಹ ನಿರ್ಮಾಣ ಮಾಡಲಾಗಿದೆ ಚಿತಾಗಾರದ ಕಾಮಗಾರಿ ಪೂರ್ಣಗೊಂಡಿದೆ. ಶೀಘ್ರವೇ ಸಾರ್ವಜನಿಕರ ಉಪಯೋಗಕ್ಕೆ ನೀಡಲಾಗುವುದು’ ಎಂದು ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯ ಎಸ್‌.ರವಿ, ತಹಶೀಲ್ದಾರ್‌ ವಿ.ಆರ್‌.ವಿಶ್ವನಾಥ್‌, ನಗರಸಭೆ ಅಧ್ಯಕ್ಷ ಮುಕ್ಬುಲ್‌ಪಾಷ, ರಾಘವೇಂದ್ರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು