ರಾಮನಗರ: ಮನೆ ಮುಂದೆ ಮಾತನಾಡುತ್ತಾ ನಿಂತಿದ್ದ ಮಹಿಳೆಯೊಬ್ಬರ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು, ವಿದ್ಯುತ್ ಪ್ರವಹಿಸಿದ್ದರಿಂದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಈ ಕುರಿತು ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಮಂಜಮ್ಮ (50) ಮೃತ ಮಹಿಳೆ. ಬೆಳಿಗ್ಗೆ 9.50ರ ಸುಮಾರಿಗೆ ಮಂಜಮ್ಮ ಅವರು, ಸೋಮಣ್ಣ ಎಂಬುವರ ಮನೆ ಮುಂಭಾಗದ ರಸ್ತೆಯಲ್ಲಿ ಜಾಗೇರಮ್ಮ ಎಂಬುವರೊಂದಿಗೆ ಮಾತನಾಡುತ್ತಾ ನಿಂತಿದ್ದರು. ಆಗ ಪಕ್ಕದಲ್ಲಿದ್ದ ವಿದ್ಯುತ್ ಕಂಬದ ಮೇಲಿಂದ ವಿದ್ಯುತ್ ತಂತಿ ತುಂಡಾಗಿ ಮಂಜಮ್ಮ ಅವರ ಮೇಲೆ ಬಿದ್ದಿತ್ತು. ಹೆಚ್ಚಿನ ಸಾಮರ್ಥ್ಯದ ವಿದ್ಯುತ್ ಪ್ರವಹಿಸಿದ್ದರಿಂದ ಮಂಜಮ್ಮ ಸ್ಥಳದಲ್ಲೇ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದರು.

ವಿದ್ಯುತ್ ಕಂಬದಲ್ಲಿ ಅಳವಡಿಸಿದ್ದ ತಂತಿ ಸಡಿಲವಾಗಿದ್ದರಿಂದ ತುಂಡಾಗಿ ಮಂಜಮ್ಮ ಅವರ ಮೇಲೆ ಬಿದ್ದಿದೆ. ಘಟನೆ ಕುರಿತು ಅವರ ಕುಟುಂಬದವರು ಬೆಸ್ಕಾಂ ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಆರೋಪದಡಿ ದೂರು ಕೊಟ್ಟಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.