ಭಾನುವಾರ, 1 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಪಟ್ಟಣ: ಆನೆ ದಾಳಿ; ತೋಟದ ಕಾವಲುಗಾರ ಸಾವು

Published 4 ಜೂನ್ 2023, 2:59 IST
Last Updated 4 ಜೂನ್ 2023, 2:59 IST
ಅಕ್ಷರ ಗಾತ್ರ

ಚನ್ನಪಟ್ಟಣ: ತಾಲ್ಲೂಕಿನ ವಿರುಪಸಂದ್ರದಲ್ಲಿ ಶನಿವಾರ ಕಾಡಾನೆ ದಾಳಿಗೆ ಮಾವಿನ ತೋಟದ ಕಾವಲುಗಾರ ವೀರಭದ್ರಯ್ಯ(52) ಎಂಬುವವರು ಮೃತಪಟ್ಟಿದ್ದಾರೆ. ಕನಕಪುರದವರಾದ ವೀರಭದ್ರಯ್ಯ ಅವರು, ಲೋಕೇಶ್ ಎಂಬುವರ ಮಾವಿನ ತೋಟದಲ್ಲಿ ಮೂರ್ನಾಲ್ಕು ತಿಂಗಳಿಂದ ಕಾವಲುಗಾರರಾಗಿ ಕೆಲಸ ಮಾಡುತ್ತಿದ್ದರು.

ನಸುಕಿನಲ್ಲಿ ತೋಟಕ್ಕೆ ಬಂದಿರುವ ಕಾಡಾನೆ ವೀರಭದ್ರಯ್ಯ ಅವರ ಮೇಲೆ ದಾಳಿ ಮಾಡಿದೆ. ತಲೆ ಮೇಲೆ ಕಾಲಿಟ್ಟು ಕೊಂದು ಹಾಕಿದ್ದು, ತಲೆ ನಜ್ಜುಗುಜ್ಜಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನೆಯನ್ನು ಖಂಡಿಸಿರುವ ಸ್ಥಳೀಯರು, ಕಾಡಾನೆಗಳ ಹಾವಳಿ ತಡೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಹಾಗೂ ಮೃತ ವೀರಭದ್ರಯ್ಯ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಅಕ್ಕೂರು ಠಾಣೆ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇತ್ತೀಚೆಗೆ ಕನಕಪುರ ತಾಲ್ಲೂಕಿನ ಕಬ್ಬಾಳು ಗ್ರಾಮದಲ್ಲಿ ಆನೆ ದಾಳಿಗೆ ರೈತರೊಬ್ಬರು ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT