ರಾಮನಗರ: ಒಂದು ವಾರದಲ್ಲಿ ಇಬ್ಬರನ್ನು ಬಲಿ ಪಡೆದಿದ್ದ 45 ವರ್ಷದ ಕಾಡಾನೆಯನ್ನು ಚನ್ನಪಟ್ಟಣ ತಾಲ್ಲೂಕಿನ ತೆಂಗಿನಕಲ್ಲು ಕಾಡು ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುರುವಾರ ಸೆರೆ ಹಿಡಿದಿದ್ದಾರೆ.

ಮತ್ತಿಗೋಡು ಆನೆ ಶಿಬಿರದಿಂದ ಕರೆ ತಂದಿದ್ದ ಆನೆಗಳಾದ ಭೀಮ, ಅರ್ಜುನ, ಮಹೇಂದ್ರ, ಶ್ರೀಕಂಠ ಹಾಗೂ ಅಭಿಮನ್ಯು ನೆರವಿನಿಂದ ಸಿಬ್ಬಂದಿ ಆನೆ ಸೆರೆಗೆ ಮೂರು ದಿನಗಳಿಂದ ಸತತ ಪ್ರಯತ್ನ ನಡೆಸುತ್ತಿದ್ದರು.

ಇಂದು ಬೆಳಿಗ್ಗೆ 6ಕ್ಕೆ ಪತ್ತೆಯಾದ ಆನೆಯನ್ನು ಸತತ ಐದು ತಾಸು ಕಾರ್ಯಾಚರಣೆ ನಡೆಸಿ, ಅರಿವಳಿಕೆ ನೀಡಿ ಸೆರೆ ಹಿಡಿಯಲಾಯಿತು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು.

ಕಾಡಾನೆ ದಾಳಿಗೆ ಮೇ 30ರಂದು ಕನಕಪುರ ತಾಲ್ಲೂಕಿನ ಕಬ್ಬಾಳು ಗ್ರಾಮದ ರೈತ ಕಾಳಯ್ಯ ಹಾಗೂ ಜೂನ್ 3ರಂದು ಚನ್ನಪಟ್ಟಣ ತಾಲ್ಲೂಕಿನ ವಿರುಪಸಂದ್ರದಲ್ಲಿ ಮಾವಿನ ತೋಟದ ಕಾವಲುಗಾರ ವೀರಭದ್ರಯ್ಯ ಎಂಬುವರು ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.