ಬುಧವಾರ, ಸೆಪ್ಟೆಂಬರ್ 22, 2021
23 °C

ಚನ್ನಪಟ್ಟಣ: ಆನೆ ತುಳಿತದಿಂದ ರೈತ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆನೆ ದಾಳಿ–ಸಾಂದರ್ಭಿಕ ಚಿತ್ರ

ರಾಮನಗರ: ಚನ್ನಪಟ್ಟಣ ತಾಲ್ಲೂಕಿನ ದೊಡ್ಡನಹಳ್ಳಿ ಗ್ರಾಮದ ಮಾವಿನ ತೋಟದಲ್ಲಿ ಮಂಗಳವಾರ ಆನೆ ತುಳಿದು ರೈತ ಸತೀಶ್‌ (35) ಮೃತಪಟ್ಟರು.

ಮಧ್ಯಾಹ್ನ 3ರ ಸುಮಾರಿಗೆ ಅವರು ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬೇಲಿ ಮರೆಯಿಂದ ಆನೆ ದಾಳಿ ನಡೆಸಿದ್ದು, ತುಳಿತಕ್ಕೆ ಒಳಗಾದ ಸತೀಶ್ ಸ್ಥಳದಲ್ಲೇ ಸಾವನ್ನಪ್ಪಿದರು.

ಈ ಗ್ರಾಮಕ್ಕೆ ಹೊಂದಿಕೊಂಡಂತೆಯೇ ತೆಂಗಿನಕಲ್ಲು ಅರಣ್ಯವಿದ್ದು, ಈ ಭಾಗದಲ್ಲಿ ಆನೆಗಳ ದಾಳಿ ಈಚೆಗೆ ಸಾಮಾನ್ಯವಾಗಿದೆ. ಅರಣ್ಯ ಇಲಾಖೆ ಕಾರ್ಯಾಚರಣೆ ಕೈಗೊಂಡಿದ್ದರೂ ಪ್ರಯೋಜನ ಆಗಿಲ್ಲ ಎಂದು ಸ್ಥಳೀಯರು ದೂರಿದರು.

ಇದನ್ನೂ ಓದು: ಬಿಡದಿ, ಚನ್ನಪಟ್ಟಣಕ್ಕೆ ಲಗ್ಗೆ ಇಟ್ಟ ಆನೆಗಳು | Prajavani

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು