ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕಪುರ ನಗರದಲ್ಲಿ ಕಾಡಾನೆಗಳು ಪ್ರತ್ಯಕ್ಷ!

ಕಾಡಂಚಿನ ಗ್ರಾಮಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಕಾಡಾನೆಗಳು ಹಿಂಡು ಈಗ ಕನಕಪುರ ಟೌನ್ ಒಳಗೆ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿವೆ.
Published 23 ಜೂನ್ 2023, 16:22 IST
Last Updated 23 ಜೂನ್ 2023, 16:22 IST
ಅಕ್ಷರ ಗಾತ್ರ

ಕನಕಪುರ: ಕಾಡಂಚಿನ ಗ್ರಾಮಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಕಾಡಾನೆಗಳು ಹಿಂಡು ಈಗ ಕನಕಪುರ ಟೌನ್ ಒಳಗೆ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿವೆ.

ನಾಲ್ಕೈದು ಕಾಡಾನೆಗಳ ಹಿಂಡು ಕನಕಪುರ ಪಟ್ಟಣದ ಕುರುಪೇಟೆ ಮತ್ತು ಅರಳಾಳು ಗ್ರಾಮದಲ್ಲಿ ಕಳೆದ ಎರಡು ದಿನಗಳ ಹಿಂದೆ ಪ್ರತ್ಯಕ್ಷವಾಗಿದ್ದವು. ಜಮೀನೊಂದರಲ್ಲಿ ಬೆಳಗಿನ ಜಾವ ಈ ಆನೆಗಳು ಕಾಣಿಸಿಕೊಂಡಿವೆ.

ಪಟ್ಟಣದ ಜನರು ಅವುಗಳನ್ನು ನೋಡಲು ಗುಂಪು ಗುಂಪಾಗಿ ಸೇರಿದ್ದರು. ಆನೆಗಳು ಗುಂಪಾಗಿ ಪಟ್ಟಣ ಪ್ರದೇಶಕ್ಕೆ ಬಂದಿರುವ ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು ಕಾಡಿಗೆ ಓಡಿಸುವ ಪ್ರಯತ್ನ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT