ರಾಮನಗರ: ‘ಸರ್ಕಾರಿ ನೌಕರರ ಪ್ರತಿಭೆ ಅನಾವರಣಕ್ಕೆ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಪೂರಕವಾಗಿವೆ. ಇದರಿಂದ ಅವರಲ್ಲಿ ಕಾರ್ಯದೊತ್ತಡ ನಿವಾರಣೆಯಾಗಲಿದೆ’ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಎನ್. ನಟರಾಜು ಗಾಣಕಲ್ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲಾ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದ ಅವರು, ‘ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಕ್ರೀಡೆ ಪೂರಕ’ ಎಂದರು.

ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ. ಚೇತನ್ ಕುಮಾರ್ ಮಾತನಾಡಿ, ‘ಸಂಘದ ಹಿಂದಿನ ಅಧ್ಯಕ್ಷರು, ಜನಪ್ರತಿನಿಧಿಗಳು ಹಾಗೂ ಸರ್ಕಾರಿ ನೌಕರರು ಜೊತೆಗೂಡಿ ಕ್ರೀಡಾಕೂಟ ಆಯೋಜಿಸುತ್ತಿದ್ದರು. ಪ್ರವಾಸ ಆಯೋಜಿಸುತ್ತಿದ್ದರು. ಈಗಿನ ಅಧ್ಯಕ್ಷರು ಸಹ ಮುಂದೆ ಅಂತಹ ಕ್ರಮ ಕೈಗೊಳ್ಳಬೇಕು’ ಎಂದು ಸಲಹೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಮಾತನಾಡಿ, ‘ನೌಕರರು ಮಾನಸಿಕವಾಗಿ ಹಾಗೂ ದೈಹಿಕವಾಗಿ ಎಷ್ಟು ಸದೃಢರಾಗಿರುತ್ತಾರೊ ಅಷ್ಟು ಸಮರ್ಥವಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತದೆ. ಈ ಕ್ರೀಡಾಕೂಟವು ಗೆಲವು-ಸೋಲಿನ ಪ್ರಶ್ನೆಯಲ್ಲ. ಬದಲಿಗೆ ಆರೋಗ್ಯದ ಸದುದ್ದೇಶ ಒಳಗೊಂಡಿದೆ. ನೌಕರರು ಕರ್ತವ್ಯದ ಜೊತೆಗೆ ಆರೋಗ್ಯಕ್ಕೂ ಒತ್ತು ನೀಡಬೇಕು’ ಎಂದರು.

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಗಿರಿ ಗೌಡ, ಜಿಲ್ಲಾಧ್ಯಕ್ಷ ಕೆ. ಸತೀಶ್ ಮಾತನಾಡಿದರು. ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿರುವ ಸರ್ಕಾರಿ ನೌಕರರ ಮಕ್ಕಳಿಗೆ ಸನ್ಮಾನಿಸಲಾಯಿತು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಧ್ವಜಾರೋಹಣ ಮಾಡಿ, ಕ್ರೀಡಾ ಜ್ಯೋತಿ ಬೆಳಗಿಸಲಾಯಿತು.

ಸಂಘದ ಗೌರವಾಧ್ಯಕ್ಷ ಬಸವರಾಜು, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಾಹಸ ಕಲಾವಿದ ಹಾಸನ ರಘು, ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕ ಶೇಖರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಅನಿತಾ, ಸಂಘದ ತಾಲ್ಲೂಕು ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ಕಾರಿ ನೌಕರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.