ಗುರುವಾರ , ಅಕ್ಟೋಬರ್ 21, 2021
21 °C

ಮಾಗಡಿ: ನೌಕರರ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾಗಡಿ: ಕರ್ನಾಟಕ ರಾಜ್ಯ ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದಿಂದ ಸೆ. 21ರಂದು ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ.

ಹೊರಗುತ್ತಿಗೆ ವಾಹನ ಚಾಲಕರು, ಲೋಡರ್ಸ್‌ಗಳು, ವಾಟರ್‌ಮನ್‌, ಡಾಟಾ ಆಪರೇಟರ್‌ಗಳನ್ನು ಗುತ್ತಿಗೆ ಪದ್ಧತಿ ಬದಲು ಪೌರಕಾರ್ಮಿಕರ ಮಾದರಿಯಲ್ಲಿ ನೇರ ವೇತನಕ್ಕೆ ಒಳಪಡಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಈ ಹೋರಾಟ ನಡೆಯಲಿದೆ ಎಂದು ಪುರಸಭೆ ‍ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಉಮಾಶಂಕರ್‌ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಪುರಸಭೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಚಾಲಕರು, ಲೋಡರ್ಸ್‌ಗಳ ವೇತನವನ್ನು ನೇರವಾಗಿ ಪಾವತಿಸ ಬೇಕು’ ಎಂದು ಉಪಾಧ್ಯಕ್ಷ ಇನಾಯತ್‌ ಉಲ್ಲಾಖಾನ್‌ ಒತ್ತಾಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು