ಸೋಮವಾರ, ಆಗಸ್ಟ್ 10, 2020
21 °C

ದೇವನಹಳ್ಳಿ: ಕೌಶಲ ಹೊಂದಿರುವ ವಲಸೆ ಕಾರ್ಮಿಕರಿಗೆ ಉದ್ಯೋಗ: ಡಿಸಿ ಪಿ.ಎನ್. ರವೀಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: ಜಿಲ್ಲೆಯಲ್ಲಿ ನೋಂದಣಿಯಾಗಿ ಕೌಶಲ ಹೊಂದಿರುವ ವಲಸೆ ಕಾರ್ಮಿಕರಿಗೆ ಶ್ರೀಘ್ರವಾಗಿ ಉದ್ಯೋಗ ನೀಡಬೇಕು.  ಅಗತ್ಯವಿರುವ ವಲಸೆ ಕಾರ್ಮಿಕರಿಗೆ ಕೌಶಲ ತರಬೇತಿ ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ  ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ನಡೆದ ವಲಸೆ ಕಾರ್ಮಿಕರಿಗೆ ಉದ್ಯೋಗ ಹಾಗೂ ತರಬೇತಿ ಕಲ್ಪಿಸುವ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಗೆ ಬೇರೆ ರಾಜ್ಯಗಳಿಂದ ವಲಸೆ ಬಂದಿರುವ ಎಲೆಕ್ಟ್ರಿಷಿಯನ್, ಪ್ಲಂಬರ್, ಪೇಂಟರ್, ಬಡಗಿ, ಚಾಲಕರು ಸೇರಿದಂತೆ ಅಸಂಘಟಿತ ವಲಸೆ ಕಾರ್ಮಿಕರಿಗೆ ಸ್ಥಳೀಯ ಅಗತ್ಯಗಳಿಗೆ ಅನುಸಾರವಾಗಿ ಮರು ಕೌಶಲ ತರಬೇತಿ ನೀಡಿ ಆರ್ಥಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಹೇಳಿದರು.

ಕೌಶಲ ತರಬೇತಿ ಪಡೆದ ವಲಸೆ ಕಾರ್ಮಿಕರಿಗೆ ಇತರ ಇಲಾಖೆಯ ಸ್ವ-ಉದ್ಯೋಗ ಯೋಜನೆಗಳ ಅನುಕೂಲ ಪಡೆಯುವಂತೆ ಸಮನ್ವಯ ಸಾಧಿಸಬೇಕು ಎಂದರು.

ಸ್ವಸಹಾಯ ಗುಂಪುಗಳು ತಯಾರಿಸುವ ಮಾಸ್ಕ್‌ಗಳನ್ನು ಮಾರಾಟ ಮಾಡಲು ತಾತ್ಕಾಲಿಕ ಮಳಿಗೆ ಜಾಗ ಕಲ್ಪಿಸಲಾಗುವುದು. ಇದರಿಂದ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ಆರ್ಥಿಕ ಅನುಕೂಲವಾಗಲಿದೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಎ.ಭೂಶಂಕರ್, ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕಿ ಸುಮಾ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಸಹಾಯಕ ನಿರ್ದೇಶಕ ಮುಕುಂದ್ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಇದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.