ಕುದೂರು: ಚಿಕ್ಕಂದಿನಿಂದಲೇ ಮಕ್ಕಳಿಗೆ ಪರಿಸರ ಅರಿವು ಮತ್ತು ಜ್ಞಾನ ತಿಳಿಸುವ ಕೆಲಸ ಮಾಡಬೇಕು ಎಂದು ಮುಖ್ಯ ಶಿಕ್ಷಕ ರಘುಪತಿ ಹೇಳಿದರು.

ಕುದೂರು ಹೋಬಳಿ ಬೆಟ್ಟಹಳ್ಳಿ ಕಾಲೊನಿ ಸರ್ಕಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಶಾಲಾವರಣದಲ್ಲಿ ಸಸಿ ನೆಟ್ಟು ಮಾತನಾಡಿದ ಅವರು, ಮಿತಿ ಇಲ್ಲದ ಪರಿಸರ ನಾಶದಿಂದ ಜಾಗತಿಕ ತಾಪಮಾನ ಹೆಚ್ಚಾಗುತ್ತಿದ್ದು ಕೂಡಲೇ ಎಚ್ಚತ್ತುಕೊಳ್ಳಬೇಕಿದೆ. ಚಿಕ್ಕನಿಂದಲೇ ಪರಿಸರ ಪ್ರಜ್ಞೆ ಬೆಳೆಸಿಕೊಂಡು ಪರಿಸರ ಉಳಿಸಬೇಕು ಎಂದು ಮಕ್ಕಳಿಗೆ ಸಲಹೆ ನೀಡಿದರು.

ಬೆಟ್ಟಹಳ್ಳಿ ಕಾಲೊನಿ ಸರ್ಕಾರಿ ಪರಿಸರ ಮಿತ್ರ ಶಾಲೆ ಪ್ರಶಸ್ತಿ, ಹಸಿರು ಶಾಲೆ ಹಾಗೂ ವಂಡರ್ ಲಾ ಪರಿಸರ ಪ್ರಶಸ್ತಿಗಳನ್ನು ಪಡೆದುಕೊಂಡಿದೆ.

ಪರಿಸರ ದಿನದ ಅಂಗವಾಗಿ ಶಾಲಾ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು. ಬಳಿಕ ಗ್ರಾಮದಲ್ಲಿ ಜಾಥಾ ನಡೆಸಿ ಗ್ರಾಮಸ್ಥರಲ್ಲಿ ಅರಿವು ಮೂಡಿಸಲಾಯಿತು.

ಅಡುಗೆ ಸಿಬ್ಬಂದಿ ಚಿಕ್ಕತಾಯಮ್ಮ, ಶಾಲಾ ವಿದ್ಯಾರ್ಥಿಗಳು ಗ್ರಾಮಸ್ಥರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.