ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುದೂರು | 'ಗ್ರಾಮಸ್ಥರಿಗೆ ಪರಿಸರ ಪಾಠ'

Published 6 ಜೂನ್ 2024, 5:55 IST
Last Updated 6 ಜೂನ್ 2024, 5:55 IST
ಅಕ್ಷರ ಗಾತ್ರ

ಕುದೂರು: ಹೋಬಳಿಯ ಬೆಟ್ಟಹಳ್ಳಿ ಕಾಲೊನಿ ಸರ್ಕಾರಿ ಶಾಲೆಯಲ್ಲಿ ಅರ್ಥಪೂರ್ಣವಾಗಿ ವಿಶ್ವ ಪರಿಸರ ದಿನಾಚರಣೆಯನ್ನು ಬುಧವಾರ ಆಚರಿಸಲಾಯಿತು.

ಮುಖ್ಯ ಶಿಕ್ಷಕ ರಘುಪತಿ ಹಾಗೂ ಪೋಷಕರ ಸಹಕಾರದಲ್ಲಿ ಶಾಲಾವರಣದಲ್ಲಿ ಸುಮಾರು 10 ಸಸಿ ನೆಟ್ಟ ವಿದ್ಯಾರ್ಥಿಗಳು ಅವುಗಳನ್ನು ಪೋಷಿಸಿ ಬೆಳೆಸುವ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದರು. ಬಳಿಕ ಮರಗಳ ಮಾದರಿಯನ್ನು ಹಿಡಿದು ಗ್ರಾಮದೆಲ್ಲಡೆ ಘೋಷಣೆ ಕೂಗುತ್ತಾ ಗ್ರಾಮಸ್ಥರಲ್ಲಿ ಅರಿವು ಮೂಡಿಸಲಾಯಿತು.

ಮುಖ್ಯ ಶಿಕ್ಷಕ ರಘುಪತಿ ಮಾತನಾಡಿ, ನಮ್ಮ ಶಾಲೆ ಕಳೆದ 17 ವರ್ಷಗಳಿಂದಲೂ ಪರಿಸರ ಕಾಳಜಿಯಲ್ಲಿ ತಮ್ಮದೇ ಆದ ಚಾಪು ಮೂಡಿಸಿದೆ. ರಾಮನಗರ ಜಿಲ್ಲೆಯ ಮೊಟ್ಟ ಮೊದಲ ಪರಿಸರ ಮಿತ್ರ ಪ್ರಶಸ್ತಿ ಪಡೆದ ಶಾಲೆ ಎಂಬ ಹೆಗ್ಗಳಿಕೆ ಕೂಡ ನಮ್ಮದು ಎಂದರು.

ಇದೇ ವೇಳೆ ಎಸ್‌ಡಿಎಂಸಿ ಸದಸ್ಯರು, ಅಡುಗೆ ಸಿಬ್ಬಂದಿ, ಪೋಷಕರು ವಿದ್ಯಾರ್ಥಿಗಳು ಹಾಜರಿದ್ದರು.

ಕುದೂರು ಹೋಬಳಿಯ ಬೆಟ್ಟಹಳ್ಳಿ ಕಾಲೋನಿ ಸರ್ಕಾರಿ ಶಾಲೆಯ ಮಕ್ಕಳು ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗ್ರಾಮದೆಲ್ಲೆಡೆ ಸಂಚರಿಸಿ ಅರಿವು ಮೂಡಿಸಿದರು.
ಕುದೂರು ಹೋಬಳಿಯ ಬೆಟ್ಟಹಳ್ಳಿ ಕಾಲೋನಿ ಸರ್ಕಾರಿ ಶಾಲೆಯ ಮಕ್ಕಳು ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗ್ರಾಮದೆಲ್ಲೆಡೆ ಸಂಚರಿಸಿ ಅರಿವು ಮೂಡಿಸಿದರು.
ಕುದೂರು ಹೋಬಳಿಯ ಕಾಗಿಮಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ
ಕುದೂರು ಹೋಬಳಿಯ ಕಾಗಿಮಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ
ಕುದೂರು ಹೋಬಳಿಯ ಕಾಗಿಮಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ
ಕುದೂರು ಹೋಬಳಿಯ ಕಾಗಿಮಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT