ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ತ್ರೀ ಸ್ವಾವಲಂಬನೆಯಿಂದ ಸಮಾನತೆ ಸಾಧ್ಯ: ಶೈಲಜಾ

Published 15 ಮಾರ್ಚ್ 2024, 5:05 IST
Last Updated 15 ಮಾರ್ಚ್ 2024, 5:05 IST
ಅಕ್ಷರ ಗಾತ್ರ

ಚನ್ನಪಟ್ಟಣ: ಹೆಣ್ಣು ಅನಿಷ್ಟವಲ್ಲ, ಅದೃಷ್ಟ ಎಂಬುದನ್ನು ಎಲ್ಲರೂ ಅರಿತುಕೊಳ್ಳಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಶೈಲಜಾ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಬಿ.ವಿ.ಹಳ್ಳಿ ಗ್ರಾಮದ ಆರೋಗ್ಯ ಕೇಂದ್ರದಲ್ಲಿ ಬುಧವಾರ ನಡೆದ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದರು.

ಸಮಾಜದಲ್ಲಿ ಸಮಾನತೆ, ನ್ಯಾಯ, ಶಾಂತಿ ನೆಲೆಸಬೇಕು ಎಂದರೆ ಮಹಿಳೆಯರು ಸ್ವಾವಲಂಬಿಯಾಗಬೇಕು. ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಮಹತ್ವವಾದುದು ಎಂಬುದನ್ನು ಸಾಬೀತುಪಡಿಸಬೇಕು ಎಂದು ಸಲಹೆ ನೀಡಿದರು.

ಹೆಣ್ಣು ಗಂಡು ಪರಸ್ಪರ ಒಬ್ಬರನ್ನು ಒಬ್ಬರು ಅರಿತುಕೊಂಡು ನಡೆಯುವುದೇ ಸಮಾನತೆ. ಮಹಿಳೆಯರ ಸ್ಥಾನಮಾನದ ಚರ್ಚೆ ಮಹಿಳಾ ದಿನಕ್ಕೆ ಸೀಮಿತವಾಗದೆ, ಅದು ಜಾರಿಯಾಗಬೇಕು ಎಂದರು.

ಜಿಲ್ಲಾ ಶಸ್ತ್ರ ಚಿಕಿತ್ಸಕಿ ಡಾ.ಜಿ.ಎಲ್.ಪದ್ಮ ಮಾತನಾಡಿ, ಮಹಿಳೆಯರಲ್ಲಿ ಪ್ರತಿಭೆ, ಸಾಮರ್ಥ್ಯ, ಕೌಶಲವಿದ್ದರೂ ಹಿಂದುಳಿಯುತ್ತಿದ್ದಾರೆ. ಎಲ್ಲ ಕ್ಷೇತ್ರದಲ್ಲೂ ತಾತ್ಸಾರ ಮಾಡುವ ಪ್ರಕ್ರಿಯೆ ತಲೆತಲಾಂತರದಿಂದಲೂ ನಡೆದುಕೊಂಡು ಬಂದಿದೆ. ಇಂತಹ ಪರಿಪಾಠ ತೊಲಗಬೇಕು ಎಂದರು.

ಪ್ರಯೋಗಶಾಲೆ ತಂತ್ರಜ್ಞೆ ಸೌಭಾಗ್ಯ ಮಾತನಾಡಿದರು.

ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ಬಿ.ವಿ.ಹಳ್ಳಿ ಆರೋಗ್ಯ ಕೇಂದ್ರದ ಮಹಿಳಾ ಆರೋಗ್ಯ ಸಿಬ್ಬಂದಿಗೆ ಬಹುಮಾನ ವಿತರಿಸಲಾಯಿತು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ರಾಜು, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಶಶಿಧರ್, ಬಿ.ವಿ.ಹಳ್ಳಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವೇಣುಗೋಪಾಲ್, ಆರೋಗ್ಯ ನಿರೀಕ್ಷಣಾಧಿಕಾರಿ ಸಿದ್ದೇಗೌಡ, ಪ್ರಯೋಗಶಾಲೆ ತಂತ್ರಜ್ಞೆ ಅಶ್ವಿನಿ, ಆರೋಗ್ಯ ಇಲಾಖೆ ಜಿಲ್ಲಾಮಟ್ಟದ ಅಧಿಕಾರಿಗಳು, ಮೇಲ್ವಿಚಾರಕರು, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT