ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗವಿಕಲರಿಗೆ ಸಲಕರಣೆಗಳ ವಿತರಣೆ

Last Updated 24 ಮಾರ್ಚ್ 2019, 13:42 IST
ಅಕ್ಷರ ಗಾತ್ರ

ಚನ್ನಪಟ್ಟಣ: ನಿರಂತರ ಸಾಮಾಜಿಕ ಸೇವೆಯಿಂದ ಲಯನ್ಸ್ ಸಂಸ್ಥೆ ಸಮಾಜದ ಕೊಂಡಿಯಾಗಿ ಕರ್ತವ್ಯ ನಿರ್ವಹಿಸುತ್ತಿದೆ ಎಂದು ಲಯನ್ಸ್ ಸಂಸ್ಥೆ ಜಿಲ್ಲಾ ಗವರ್ನರ್‌ ರೇಣುಕುಮಾರ್ ಅಭಿಪ್ರಾಯಪಟ್ಟರು.

ಪಟ್ಟಣದ ಬಾಲು ಪಬ್ಲಿಕ್ ಶಾಲೆಯಲ್ಲಿ ತಾಲ್ಲೂಕು ಲಯನ್ಸ್ ಸಂಸ್ಥೆ ವತಿಯಿಂದ ಶನಿವಾರ ಆಯೋಜಿಸಿದ್ದ ಜಿಲ್ಲಾ ರಾಜ್ಯಪಾಲರ ಭೇಟಿ ಹಾಗೂ ಅಂಗವಿಕಲರಿಗೆ ವಿವಿಧ ಸಲಕರಣೆಗಳ ವಿತರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಸೇವಾ ಮನೋಭಾವ ಹೊಂದಿರುವ ಸಂಸ್ಥೆಯು ಅಂಗವಿಕಲರು, ವೃದ್ಧರು, ಅನಾಥರು, ನಿರ್ಗತಿಕರು ಶೋಷಣೆಗೊಳಗಾದವರ ಸೇವೆ ಮಾಡುತ್ತಾ ಸಮಾಜದಲ್ಲಿ ಗುರುತಿಸಿಕೊಂಡಿದೆ ಎಂದರು.

ಲಯನ್ಸ್ ಸಂಸ್ಥೆಯಲ್ಲಿ ಹಲವು ವರ್ಷಗಳ ಸೇವೆ ಸಲ್ಲಿಸಿದ ಶಿವರಾಮು ಹಾಗೂ ವಿ.ವೆಂಕಟಸುಬ್ಬಯ್ಯ ಚೆಟ್ಟಿ ಅವರಿಗೆ ಜಿಲ್ಲಾ ಲಯನ್ಸ್ ಸಂಸ್ಥೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಸ್ಥೆಯ ಪದಾಧಿಕಾರಿಗಳಾದ ಸುರೇಶ್ ಕುಮಾರ್, ಎಂ.ಎನ್.ಕೃಷ್ಣಕುಮಾರ್, ಸಿ.ವಿ.ಮಂಜುನಾಥ್, ದ್ವಾರಕನಾಥ್, ಪ್ರಭಾಮೂರ್ತಿ, ಭಾರತಿ ಕೃಷ್ಣಪ್ಪ, ಮಂಜುನಾಥ್, ಕಿಶೋರ್, ಅಜಿತ್, ತಿಪ್ರೇಗೌಡ, ರಮಣ ಮಹರ್ಷಿ ಅಂಧರ ಪರಿಷತ್ತಿನ ಜಿಲ್ಲಾ ಸಂಯೋಜಕ ಸಿದ್ದೇಗೌಡ, ಅಂಗವಿಕಲ ಸಂಸ್ಥೆ ಕಾರ್ಯಕರ್ತರಾದ ನಾಗಮ್ಮಣ್ಣಿ, ಪುಟ್ಟಮಾದು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT