ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಡಿತರ ನೀಡಲು ಹೆಚ್ಚುವರಿ ಹಣ: ಗ್ರಾಮಸ್ಥರೊಂದಿಗೆ ವಾಗ್ವಾದ

Last Updated 7 ಏಪ್ರಿಲ್ 2020, 14:35 IST
ಅಕ್ಷರ ಗಾತ್ರ

ರಾಮನಗರ: ತಾಲ್ಲೂಕಿನ ಅರೇಹಳ್ಳಿ ಗ್ರಾಮದಲ್ಲಿನ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ವಿತರಣೆಗೆ ಸಾರ್ವಜನಿಕರಿಂದ ಹೆಚ್ಚುವರಿ ಹಣ ಪಡೆಯುತ್ತಿರುವುದನ್ನು ಖಂಡಿಸಿ ಸ್ಥಳೀಯರು ಮಂಗಳವಾರ ಪಡಿತರ ವಿತರಕರ ಜೊತೆ ವಾಗ್ವಾದ ನಡೆಸಿದರು.

ಸರ್ಕಾರ ನಿಗದಿ ಪಡಿಸಿರುವ ದರದ ಜೊತೆಗೆ ಪ್ರತಿ ರೇಷನ್‌ ಕಾರ್ಡ್‌‌ಗೆ ಪಡಿತರ ವಿತರಣೆಗೆ ₹20 ಹೆಚ್ಚಿಗೆ ಪಡೆಯಲಾಗುತ್ತಿದೆ. ಆದರೆ, ಇದಕ್ಕೆ ಯಾವುದೇ ರಸೀತಿ ನೀಡುತ್ತಿಲ್ಲ. ಇದನ್ನು ಪ್ರಶ್ನಿಸಿದರೆ ಪಡಿತರವನ್ನೇ ನೀಡುವುದಿಲ್ಲ ಎಂದು ಕೆಲವು ಗ್ರಾಮಸ್ಥರು ಆರೋಪಿಸಿದರು. ಸರ್ಕಾರವೇ ಶುಲ್ಕ ನಿಗದಿಪಡಿಸಿದ್ದರೆ ಅದನ್ನು ನೀಡಲು ಸಿದ್ಧ. ಆದರೆ, ಹೆಚ್ಚುವರಿ ಶುಲ್ಕವನ್ನು ಯಾವುದೇ ಕಾರಣಕ್ಕೂ ನೀಡುವುದಿಲ್ಲ ಎಂದು ಪಟ್ಟುಹಿಡಿದರು. ಈ ಸಂದರ್ಭ ನ್ಯಾಯಬೆಲೆ ಅಂಗಡಿಯ ಸಿಬ್ಬಂದಿ ಹಾಗೂ ಗ್ರಾಹಕರ ನಡುವೆ ಮಾತಿನ ಚಕಮಕಿ ನಡೆಯಿತು.

ಹೆಚ್ಚುವರಿ ಶುಲ್ಕ ಪಡೆಯುತ್ತಿರುವುದನ್ನು ಪ್ರಶ್ನಿಸಿದರೆ ನಮ್ಮ ಪಡಿತರ ಕಾರ್ಡ್‌ ಅನ್ನೇ ರದ್ದುಗೊಳಿಸುವ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಆಹಾರ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕು. ಯಾವುದಕ್ಕೆ ಎಷ್ಟು ಶುಲ್ಕ ನೀಡಬೇಕು ಎಂಬುದನ್ನು ಅಂಗಡಿಯ ಮುಂದೆ ಪ್ರದರ್ಶಿಸಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT