ಸೋಮವಾರ, ಜನವರಿ 27, 2020
26 °C

ಪ್ರಚೋದನಾಕಾರಿ ಪೋಸ್ಟ್‌: ವರ್ತಕ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದ ಕದಡುವ ಪೋಸ್ಟ್‌ ಹಾಕಿದ ಆರೋಪದ ಮೇಲೆ ವರ್ತಕ ಮಹಮ್ಮದ್‌ ಅಬ್ದುಲ್‌ ಎಂಬುವರ ವಿರುದ್ಧ ಬಿಡದಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೇರಳದವರಾದ ಮಹಮ್ಮದ್ ಅಲ್ಲಿನ ಇಂಡಿಯನ್‌ ಮುಸ್ಲಿಂ ಲೀಗ್‌ ಪಕ್ಷದ ಮುಖಂಡರಾಗಿದ್ದಾರೆ. ಆತ ಕಳೆದ ಕೆಲ ವರ್ಷದಿಂದ ಬಿಡದಿಯಲ್ಲಿ ಬಟ್ಟೆ, ಚಪ್ಪಲಿ ವ್ಯಾಪಾರ ನಡೆಸುತ್ತಿದ್ದಾರೆ. ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಕೋಮು ಸಾಮರಸ್ಯ ಕದಡುವ ಪೋಸ್ಟ್‌ಗಳನ್ನು ಹಾಕಿದ್ದಾರೆ ಎಂದು ಆರೋಪಿಸಿ ಕೆಲವು ಸಂಘಟನೆಗಳ ಕಾರ್ಯಕರ್ತರು ಬಿಡದಿ ಪೊಲೀಸರಿಗೆ ಭಾನುವಾರ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು.

ಮೆರವಣಿಗೆ

ಮಹಮ್ಮದ್ ಅಬ್ದುಲ್‌ ನಡೆ ಖಂಡಿಸಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಬಿಡದಿ ಪಟ್ಟಣದಲ್ಲಿ ಮೆರವಣಿಗೆ ನಡೆಸಿದರು. ಅಬ್ದುಲ್‌ಗೆ ಸೇರಿದ್ದ ಅಂಗಡಿಗಳ ಮೇಲೆ ಹಾಕಲಾಗಿದ್ದ ಬ್ಯಾನರ್‌ ಮತ್ತು ಬಂಟಿಂಗ್ಸ್‌ಗಳನ್ನು ತೆಗೆಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು