ಸಾತನೂರು (ಕನಕಪುರ): ಸಮಾಜದಲ್ಲಿ ಅತ್ಯುತ್ತಮ ಸೇವಾ ಕ್ಷೇತ್ರವಾದ ಶಿಕ್ಷಣ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರನ್ನು ಗುರುತಿಸಿ ಪ್ರಶಸ್ತಿ ನೀಡಿ ಸನ್ಮಾನಿಸುತ್ತಿರುವುದು ಪ್ರಶಂಸನೀಯವೆಂದು ರಾಜ್ಯ ಒಕ್ಕಲಿಗರ ಒಕ್ಕೂಟದ ಸಂಘಟನಾ ಕಾರ್ಯದರ್ಶಿ ಗಬ್ಬಾಡಿ ಕಾಡೇಗೌಡ ಹೇಳಿದರು.

ಇಲ್ಲಿನ ಸಾತನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಡಿ.ರಂಗಸ್ವಾಮಿ ಅವರಿಗೆ ಜಿಲ್ಲಾ ಲೇಖಕರ ವೇದಿಕೆ ಹಾಗೂ ರಾಜ್ಯ ಒಕ್ಕಲಿಗರ ಒಕ್ಕೂಟ ವತಿಯಿಂದ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾದುದು. ಸಮಾಜದಿಂದ ಏನನ್ನು ಬಯಸದೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಶಿಕ್ಷಕ ವರ್ಗವನ್ನು ಸನ್ಮಾನಿಸುವ ಪ್ರೋತ್ಸಾಹಿಸುವ ಕೆಲಸವಾಗಬೇಕು. ಅಂತಹ ಕೆಲಸವನ್ನು ಜಿಲ್ಲಾ ಲೇಖಕರ ವೇದಿಕೆಯು ನೆರವೇರಿಸುತ್ತಿರುವುದು ಶ್ಲಾಘನೀಯ’ ಎಂದರು.

ಜಿಲ್ಲಾ ಲೇಖಕರ ವೇದಿಕೆ ಅಧ್ಯಕ್ಷ ಕೂ.ಗಿ.ಗಿರಿಯಪ್ಪ ಮಾತನಾಡಿ, ‘ಶಿಕ್ಷಕರು ಯಾವುದೆ ಪದೋನ್ನತಿ ಬಯಸದೆ 30-40 ವರ್ಷಗಳ ಕಾಲ ನಿರಂತರವಾಗಿ ಸೇವೆ ಸಲ್ಲಿಸುತ್ತಾರೆ. ಅವರಿಂದ ಕಲಿತವರು ದೊಡ್ಡ ದೊಡ್ಡ ಉನ್ನತ ಹುದ್ದೆಗಳನ್ನು ಅಲಂಕರಿಸುತ್ತಾರೆ. ವಿದ್ಯಾರ್ಥಿಗಳಲ್ಲಿಯೇ ತಮ್ಮ ಕನಸನ್ನು ಸಾಕಾರಗೊಳಿಸಿಕೊಳ್ಳುತ್ತಾರೆ’ ಎಂದು ಶಿಕ್ಷಕರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಾಹಿತಿ ಮಾಯಣ್ಣ, ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಚೀಲೂರು ಮುನಿರಾಜು, ಕನ್ನಡಾಂಬೆ ಸಾಂಸ್ಕೃತಿಕ ಸಾಮಾಜಿಕ ಟ್ರಸ್ಟ್ ಅಧ್ಯಕ್ಷ ಅಸ್ಗರ್‌ಖಾನ್, ಮುಖ್ಯ ಶಿಕ್ಷಕರಾದ ವಿ.ರಾಜು, ಬಸವೇಗೌಡ, ವೇದಿಕೆ ಪದಾಧಿಕಾರಿಗಳಾದ ಟಿ.ಎಂ.ರಾಮಯ್ಯ, ಬಿ.ಶಿವಲಿಂಗಯ್ಯ, ತಿಪ್ಪೇಸ್ವಾಮಿ, ರೇಣುಕಾದೇವಿ ಗೀತಗಾಯನ ನಡೆಸಿಕೊಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.