ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು
ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು ಏಜೆಂಟರ ಹಾವಳಿ ಮಿತಿ ಮೀರಿದೆ. ರೈತರ ಯಾವುದೇ ಕೆಲಸಗಳು ಆಗುತ್ತಿಲ್ಲ. ಅನ್ನದಾತರ ಸಮಸ್ಯೆಗಳಿಗೆ ಜಿಲ್ಲಾಡಳಿತ ಸ್ಪಂದಿಸುತ್ತಿಲ್ಲ. ಡಿ.ಸಿ ರೈತ ವಿರೋಧಿಯಾಗಿದ್ದಾರೆ.
– ಕೆ. ಮಲ್ಲಯ್ಯ, ರಾಜ್ಯ ಉಪಾಧ್ಯಕ್ಷ ರೈತ ಸಂಘ
ಶಾಸಕ ಇಕ್ಬಾಲ್ ಹುಸೇನ್ ಆಪ್ತನೊಬ್ಬ ಕನಕಪುರ ತಾಲ್ಲೂಕಿನಲ್ಲಿ ನಕಾಶೆ ರಸ್ತೆ ಒತ್ತುವರಿ ಮಾಡಿಕೊಂಡು ತನ್ನ ಹೆಸರಿಗೆ ಖಾತೆ ಮಾಡಿಸಿಕೊಂಡಿದ್ದಾನೆ. ಈ ಬಗ್ಗೆ ದೂರು ಕೊಟ್ಟರೂ ಜಿಲ್ಲಾಡಳಿತ ಕ್ರಮ ಕೈಗೊಂಡಿಲ್ಲ.