ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಾದ್ಯಂತ ಸಾಂಕೇತಿಕ ಪ್ರತಿಭಟನೆ

Last Updated 24 ಸೆಪ್ಟೆಂಬರ್ 2020, 14:17 IST
ಅಕ್ಷರ ಗಾತ್ರ

ರಾಮನಗರ: ಕಾರ್ಮಿಕ ಕಾನೂನು, ಭೂ ಸುಧಾರಣ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ವಿವಿಧ ಸಂಘಟನೆಗಳು ಶುಕ್ರವಾರ ಪ್ರತಿಭಟನೆಗೆ ಕರೆ ನೀಡಿವೆ. ಇದನ್ನು ಬೆಂಬಲಿಸಿ ಜಿಲ್ಲೆಯಲ್ಲೂ ಸಾಂಕೇತಿಕ ಪ್ರತಿಭಟನೆ ನಡೆಸಲು ಕೆಲ ಸಂಘಟನೆಗಳು ಮುಂದಾಗಿವೆ.

ಕಾರ್ಮಿಕ ಹಾಗೂ ರೈತ ಪರ ಸಂಘಟನೆ ಮತ್ತು ಕನ್ನಡಪರ ಸಂಘಟನೆಗಳು ಸಾಂಕೇತಿಕವಾಗಿ ಹೆದ್ದಾರಿ ತಡೆ ನಡೆಸಲಿವೆ. ರೈತ ಸಂಘದಿಂದ ಜಿಲ್ಲೆಯ ನಾಲ್ಕು ತಾಲೂಕಿನಲ್ಲಿ ಹೆದ್ದಾರಿ ತಡೆ ಕಾರ್ಯಕ್ರಮವಿದೆ. ಮಾಗಡಿ ತಾಲ್ಲೂಕಿನಲ್ಲಿ ಕುದೂರು ಹ್ಯಾಂಡ್‍ಪೋಸ್ಟ್ ಬಳಿ, ಚನ್ನಪಟ್ಟಣದಲ್ಲಿ ಸಾತನೂರು ಸರ್ಕಲ್ ಬಳಿ, ಕನಕಪುರದಲ್ಲಿ ಹೆದ್ದಾರಿ ಬಳಿ ಹಾಗೂ ರಾಮನಗರದ ಐಜೂರು ವೃತ್ತದಲ್ಲಿ ಬೆಳಗ್ಗೆ 11ಕ್ಕೆ ಪ್ರತಿಭಟನೆ ನಡೆಯುವ ಸಾಧ್ಯತೆ ಇದೆ. ಶುಕ್ರವಾರ ಸಾಂಕೇತಿಕ ಪ್ರತಿಭಟನೆ ನಡೆಸಿ 28ರಂದು ಕರೆ ನೀಡಿರುವ ಕರ್ನಾಟಕ ಬಂದ್‌ ಬೆಂಬಲಿಸಲು ನಿರ್ಧರಿಸಿರುವುದಾಗಿ ರೈತ ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ.

ಬಿಡದಿ ಕೈಗಾರಿಕಾ ಪ್ರದೇಶದಲ್ಲಿಯೂ ಶುಕ್ರವಾರ ಕಾರ್ಮಿಕ ಸಂಘಟನೆಗಳ ಮುಖಂಡರು ಕೆಲ ಹೊತ್ತು ಪ್ರತಿಭಟನೆ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT