ಸೋಮವಾರ, ನವೆಂಬರ್ 18, 2019
26 °C

ಮಗಳ ಮೇಲೆಯೇ ಅತ್ಯಾಚಾರ: ಆರೋಪಿಗೆ ಜೀವಾವಧಿ ಶಿಕ್ಷೆ

Published:
Updated:

ರಾಮನಗರ: ಮಗಳ ಮೇಲೆಯೇ ನಿರಂತರ ಅತ್ಯಾಚಾರ ಎಸಗಿ, ಆಕೆ ಗರ್ಭ ಧರಿಸಲು ಕಾರಣನಾಗಿದ್ದ ಆರೋಪಿಗೆ ಬೆಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ಮಕ್ಕಳ ಸ್ನೇಹಿ ನ್ಯಾಯಾಲಯವು ಜೀವಾವಧಿ ಶಿಕ್ಷೆ ₹5 ಲಕ್ಷ ದಂಡ ವಿಧಿಸಿದೆ.

ಮುತ್ತುರಾಜ್‌ ಶಿಕ್ಷೆಗೆ ಒಳಗಾದ ಆರೋಪಿ. ಆತ ತನ್ನ 16 ವರ್ಷದ ಮಗಳ ಮೇಲೆ ಆಗಾಗ್ಗೆ ಅತ್ಯಾಚಾರ ಎಸಗಿದ್ದು, ಇದರಿಂದ ಆಕೆ ಗರ್ಭ ಧರಿಸಿದ್ದಳು. ನಂತರದಲ್ಲಿ ಪ್ರಕರಣ ಬೆಳಕಿಗೆ ಬಂದು, 2014ರಲ್ಲಿ ಕುಂಬಳಗೂಡು ಪೊಲೀಸ್‌ಠಾಣೆ ವ್ಯಾಪ್ತಿಯಲ್ಲಿ ಪೋಕ್ಸೊ ಕಾಯ್ಡೆಯ ಅಡಿ ಪ್ರಕರಣ ದಾಖಲಾಗಿತ್ತು. ಅಂದಿನ ಪೊಲೀಸ್‌ ಇನ್‌ಸ್ಪೆಕ್ಟರ್‌ ಬಿ.ಎಸ್‌. ಮಂಜುನಾಥ್‌ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಜೆ.ಎಸ್. ಪ್ರಶೀಲಕುಮಾರಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಶಿಕ್ಷೆ ಮತ್ತು ದಂಡ ವಿಧಿಸಿದರು. ಸರ್ಕಾರದ ಪರವಾಗಿ ಎ.ಎಸ್. ಅನಿಲ್‌ಕುಮಾರ್ ವಾದ ಮಂಡಿಸಿದ್ದರು. ಕೋರ್ಟ್‌ ಪಿ.ಸಿ.ಯಾಗಿ ಶೀಲವಂತರ್‌, ಮಹೇಶ್‌ ಕಾರ್ಯ ನಿರ್ವಹಿಸಿದರು.

ಪ್ರತಿಕ್ರಿಯಿಸಿ (+)