ರಾಮನಗರ: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬರ ಭ್ರೂಣಲಿಂಗ ಪತ್ತೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ, ಆಸ್ಪತ್ರೆಯ ರೆಡಿಯಾಲಜಿಸ್ಟ್ ಡಾ. ಶಶಿ ಎಸ್.ಎಲ್ ಅವರನ್ನು ಅಮಾನತುಗೊಳಿಸಿ ಶಿಸ್ತು ಪ್ರಾಧಿಕಾರ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಶಿವಕುಮಾರ್ ಕೆ.ಬಿ. ಸೋಮವಾರ ಆದೇಶ ಹೊರಡಿಸಿದ್ದಾರೆ.

ಈಗಾಗಲೇ ಇಬ್ಬರು ಹೆಣ್ಣು ಮಕ್ಕಳಿರುವ ಬೆಂಗಳೂರು ಮೂಲದ ಮಹಿಳೆ ಮೂರನೇ ಸಲ ಗರ್ಭ ಧರಿಸಿದ್ದರು. ಗಂಡು ಮಗುವಿನ ನಿರೀಕ್ಷೆಯಲ್ಲಿದ್ದ ಅವರು, ತಮ್ಮ ಸಂಬಂಧಿಕರ ಮೂಲಕ ಶಾರದಮ್ಮ ಎಂಬ ಮಧ್ಯವರ್ತಿಯನ್ನು ಸಂಪರ್ಕಿಸಿದ್ದರು. ಶಾರದಮ್ಮ ಜಿಲ್ಲಾಸ್ಪತ್ರೆಯ ಸ್ಕ್ಯಾನಿಂಗ್ ವಿಭಾಗದಲ್ಲಿ ಮಹಿಳೆಯ ಭ್ರೂಣಲಿಂಗ ಪತ್ತೆ ಮಾಡಿಸಿದ್ದರು.

ನಂತರ ಮಹಿಳೆ ಬೆಂಗಳೂರಿನಲ್ಲಿ ಗರ್ಭಪಾತ ಮಾಡಿಸಿಕೊಂಡಿದ್ದರು. ಬಳಿಕ, ತೀವ್ರ ರಕ್ತಸ್ರಾವವಾಗಿದ್ದರಿಂದ ಮಹಿಳೆ ಬನಶಂಕರಿಯ ಸರ್ಕಾರಿ ಆಸ್ಪತ್ರೆಗೆ ಹೋಗಿದ್ದರು. ಮಹಿಳೆಯ ತಪಾಸಣೆ ಮಾಡಿದ್ದ ವೈದ್ಯರು, ಹೆಚ್ಚಿನ ಚಿಕಿತ್ಸೆಗಾಗಿ ವಾಣಿ ವಿಲಾಸ ಆಸ್ಪತ್ರೆಗೆ ಕಳಿಸಿದ್ದರು. ಆಗ ಗರ್ಭಪಾತ ವಿಷಯ ಗೊತ್ತಾಗಿತ್ತು.

ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಭ್ರೂಣಲಿಂಗ ಪತ್ತೆಗೆ ಸ್ಕ್ಯಾನಿಂಗ್ ಮಾಡಿಸಿಕೊಂಡಿದ್ದಾಗಿ ಮಹಿಳೆ ನೀಡಿದ ಹೇಳಿಕೆ ಮೇರೆಗೆ, ಇಲಾಖೆಯ ಪ್ರಸವಪೂರ್ವ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ತಡೆ (ಪಿಸಿ ಆ್ಯಂಡ್ ಪಿಎನ್ಡಿಟಿ) ಕಾರ್ಯಕ್ರಮದ ಉಪ ನಿರ್ದೇಶಕ ಡಾ. ವಿವೇಕ್ ದೊರೈ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದರು.

ರೆಡಿಯಾಲಜಿಸ್ಟ್ ಡಾ. ಶಶಿ ಹಾಗೂ ಸ್ಕ್ಯಾನಿಂಗ್ ವಿಭಾಗದ ಸಿಬ್ಬಂದಿಯನ್ನು ವಿಚಾರಣೆ ನಡೆಸಿ, ಸ್ಕ್ಯಾನಿಂಗ್ ಮಾಡಿಸಿಕೊಂಡಿರುವವರ ವಿವರವನ್ನು ಕಲೆಹಾಕಿ ವರದಿಗಳನ್ನು ಪರಿಶೀಲಿಸಿದ್ದರು. ಈ ವೇಳೆ, ಜಿಲ್ಲಾಸ್ಪತ್ರೆಯಲ್ಲಿ ಭ್ರೂಣಲಿಂಗ ಪತ್ತೆ ಮಾಡಿದ ಬಳಿಕವೇ ಮಹಿಳೆ ಗರ್ಭಪಾತಕ್ಕೆ ಒಳಗಾಗಿರುವುದು ಹಾಗೂ ತಜ್ಞ ವೈದ್ಯರು ಸಹ ಇದರಲ್ಲಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿತ್ತು.

ಡಾ. ಶಶಿ ಅವರು ಸದರಿ ಹುದ್ದೆಯಲ್ಲೇ ಮುಂದುವರಿದರೆ ಪ್ರಕರಣದ ತನಿಖೆಗೆ ಅಡ್ಡಿಯುಂಟು ಮಾಡುವ ಅಥವಾ ಹಸ್ತಕ್ಷೇಪ ಮಾಡುವ ಹಾಗೂ ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇರುವುದರಿಂದ ಅವರನ್ನು ಅಮಾನತುಗೊಳಿಸಲಾಗಿದೆ. ಅಲ್ಲದೆ, ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಅವರು ಕೇಂದ್ರ ಸ್ಥಾನ ಬಿಡುವಂತಿಲ್ಲ. ಜೀವನಾಂಶ ಭತ್ಯೆ ಸಲುವಾಗಿ ಕಲಬುರಗಿ ಜಿಲ್ಲೆಯ ಚಿಂಚೋಳಿ ಆಸ್ಪತ್ರೆಗೆ ಸಾರ್ವಜನಿಕ ಆಸ್ಪತ್ರೆಗೆ ಅವರ ಲೀನ್ (ಕರ್ತವ್ಯ) ಬದಲಾವಣೆ ಮಾಡಲಾಗಿದೆ ಎಂದು ಅಮಾನತು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.