ರಾಮನಗರ: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬರ ಭ್ರೂಣಲಿಂಗ ಪತ್ತೆ ಮಾಡಿ, ಬೆಂಗಳೂರಿನ ಅಜ್ಞಾತಸ್ಥಳದಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಭ್ರೂಣ ತೆಗೆಸಿದ ಆರೋಪಕ್ಕೆ ಸಂಬಂಧಿಸಿದಂತೆ, ರಾಮನಗರ ಮತ್ತು ಬೆಂಗಳೂರಿನಲ್ಲಿ ಪ್ರತ್ಯೇಕವಾಗಿ ಪ್ರಕರಣ ದಾಖಲಿಸಲು ಆರೋಗ್ಯ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.

ವಿಷಯ ಬೆಳಕಿಗೆ ಬರುತ್ತಿದ್ದಂತೆ, ಇಲಾಖೆಯ ಪ್ರಸವಪೂರ್ವ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ತಡೆ (ಪಿಸಿ ಆ್ಯಂಡ್ ಪಿಎನ್ಡಿಟಿ) ಕಾರ್ಯಕ್ರಮದ ಉಪ ನಿರ್ದೇಶಕ ಡಾ. ವಿವೇಕ್ ದೊರೈ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದರು. ಸ್ಕ್ಯಾನಿಂಗ್ ವಿಭಾಗದ ರೆಡಿಯಾಲಜಿಸ್ಟ್ ಮತ್ತು ಸಿಬ್ಬಂದಿಯನ್ನು ವಿಚಾರಣೆ ನಡೆಸಿದ್ದ ಅವರು, ತನಿಖೆ ಮುಗಿಯುವವರೆಗೆ ಭ್ರೂಣಲಿಂಗ ಪತ್ತೆ ಮಾಡಿದ್ದೆನ್ನಲಾದ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಯಂತ್ರ ಬಳಸದಂತೆ ಸೂಚಿಸಿದ್ದರು.

ಕೋರ್ಟ್–ಠಾಣೆಗೆ ದೂರು: ‘ಭ್ರೂಣಲಿಂಗ ಪತ್ತೆ ಮಾಡಿಸಿಕೊಂಡಿದ್ದಕ್ಕಾಗಿ ಬೆಂಗಳೂರಿನ ತಾತಗುಣಿಯ ಮಹಿಳೆ, ಆಕೆಯ ಪತಿ, ಆಸ್ಪತ್ರೆಯ ರೆಡಿಯಾಲಜಿಸ್ಟ್ ಹಾಗೂ ಇಬ್ಬರು ಅನಾಮಧೇಯ ವ್ಯಕ್ತಿಗಳ ವಿರುದ್ಧ ರಾಮನಗರದ ಸ್ಥಳೀಯ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗುವುದು’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್ ‘ಪ್ರಜಾವಾಣಿ’ಗೆ ತಿಳಿಸಿದರು.

‘ಆರೋಪಕ್ಕೆ ಸಂಬಂಧಿಸಿದಂತೆ ಮಹಿಳೆ, ಆಕೆಯ ಪತಿ, ರೆಡಿಯಾಲಜಿಸ್ಟ್, ಅಜ್ಞಾತಸ್ಥಳದಲ್ಲಿ ಶಸ್ತ್ರಚಿಕಿತ್ಸೆ ಮಾಡಿದವರು, ಅದಕ್ಕೆ ಸಹಕರಿಸಿದವರು ಸೇರಿದಂತೆ ಕೃತ್ಯದಲ್ಲಿ ಭಾಗಿಯಾದವರನ್ನು ವಿಚಾರಣೆ ನಡೆಸಿ, ಸ್ಥಳ ಪರಿಶೀಲನೆ ಮಾಡಿ ವರದಿ ಸಿದ್ದಪಡಿಸಲಾಗಿದೆ. ಅದರ ಆಧಾರದ ಮೇಲೆ, ಬೆಂಗಳೂರಿನ ಜಿಲ್ಲಾ ಆರೋಗ್ಯಾಧಿಕಾರಿ ಮೂಲಕ ಎಲ್ಲರ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿ ಪ್ರಕರಣ ದಾಖಲಿಸಲಾಗುವುದು’ ಎಂದು ಡಾ. ವಿವೇಕ್ ದೊರೈ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.