ಭಾನುವಾರ, ಸೆಪ್ಟೆಂಬರ್ 27, 2020
27 °C

ರಾಮನಗರ: ಜಿಲ್ಲೆಯಲ್ಲಿ 50 ಮಂದಿಗೆ ಕೋವಿಡ್ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಜಿಲ್ಲೆಯಲ್ಲಿ ಗುರುವಾರ ಒಟ್ಟು 50 ಮಂದಿಯಲ್ಲಿ ಕೋವಿಡ್‌-೧೯ ಸೋಂಕು ಪತ್ತೆಯಾಗಿದೆ.

ಚನ್ನಪಟ್ಟಣ 5, ಕನಕಪುರ 18, ಮಾಗಡಿ 3 ಮತ್ತು ರಾಮನಗರ 24 ಪ್ರಕರಣಗಳು ವರದಿಯಾಗಿವೆ. ಸೋಂಕಿತರನ್ನು ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 1469 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 329, ಕನಕಪುರ 299, ಮಾಗಡಿ 270 ಮತ್ತು ರಾಮನಗರ 571 ಪ್ರಕರಣಗಳು ಸೇರಿವೆ.

39 ಮಂದಿ ಗುಣಮುಖ: ಗುರುವಾರ ಚನ್ನಪಟ್ಟಣ ತಾಲ್ಲೂಕಿನಲ್ಲಿ 7, ಕನಕಪುರ ತಾಲ್ಲೂಕಿನಲ್ಲಿ 5, ಮಾಗಡಿ ತಾಲ್ಲೂಕಿನಲ್ಲಿ 9 ಹಾಗೂ ರಾಮನಗರ ತಾಲ್ಲೂಕಿನಲ್ಲಿ 18 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 640 ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಚನ್ನಪಟ್ಟಣ 116, ಕನಕಪುರ 150, ಮಾಗಡಿ 173 ಮತ್ತು ರಾಮನಗರ 201 ಜನರು ಸೇರಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 17 ಮಂದಿ ಕೋವಿಡ್ ಸೋಂಕಿನಿಂದ ನಿಧನರಾಗಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು