ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕಪುರ: ತಾಲ್ಲೂಕು ಕಚೇರಿಯಲ್ಲಿ ನಿಜಶರಣನ ಜಯಂತಿ

Last Updated 22 ಜನವರಿ 2023, 4:51 IST
ಅಕ್ಷರ ಗಾತ್ರ

ಕನಕಪುರ: ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ವತಿಯಿಂದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ನಿಜ ಶರಣ ಅಂಬಿಗರ ಚೌಡಯ್ಯ ಅವರ 903ನೇ ಜಯಂತಿ ಕಾರ್ಯಕ್ರಮ ನಡೆಯಿತು.

ಗ್ರೇಡ್-2 ತಹಶೀಲ್ದಾರ್ ಮಾತನಾಡಿ, ‘ಅಂಬಿಗರ ಚೌಡಯ್ಯನವರು 9ನೇ ಶತಮಾನದಲ್ಲಿ ಸಮಾಜದ ಅಭಿವೃದ್ಧಿ ಮತ್ತು ಪ್ರಗತಿಗೆ ಶ್ರವಿಸಿದ್ದಾರೆ. ಸಮಾಜದಲ್ಲಿ ಇದ್ದಂತಹ ಮೂಢ ನಂಬಿಕೆಯನ್ನು ತೊಡೆದು ಹಾಕಿ ಸಮಾಜದಲ್ಲಿ ಸಮಾನತೆ ಮೂಡುವ ಕೆಲಸ ಮಾಡಿದ್ದಾರೆ’ ಎಂದು ತಿಳಿಸಿದರು.

ಅಂಬಿಗರ ಚೌಡಯ್ಯ ಅವರು ಎಲ್ಲ ಸಮಾಜದವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಕೆಲಸ ಮಾಡಿದ್ದು, ಅವರ ವಿಚಾರಧಾರೆಗಳು ಸಮಾಜದಲ್ಲಿ ಇಂದಿಗೂ ಪ್ರಸ್ತುತವಾಗಿವೆ. ಅವರ ಆಚಾರ ವಿಚಾರಗಳನ್ನು ನಾವು ಪಾಲಿಸಬೇಕು ಎಂದು ಹೇಳಿದರು.

ಜಯಂತಿಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ನಾಗರಿಕರು, ಪಾಲ್ಗೊಂಡು ಅಂಬಿಗರ ಚೌಡಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ತೋಟಗಾರಿಕೆ ಇಲಾಖೆ ಶ್ರೀನಿವಾಸ್, ಆಹಾರ ಇಲಾಖೆ ಪ್ರಕಾಶ್, ಆರ್.ಐ. ಶಿವರುದ್ರಯ್ಯ, ಕುರುಬ ಸಂಘದ ಚಂದ್ರು, ಗಂಗಮತಸ್ಥರ ಗಿರೀಶ್, ಜಿಲ್ಲಾ ಲೇಖಕರ ವೇದಿಕೆ ಅಧ್ಯಕ್ಷ ಕೂಗಿ ಗಿರಿಯಪ್ಪ, ರಾಜ್ಯ ಒಕ್ಕಲಿಗರ ಒಕ್ಕೂಟದ ಸಂಘಟನಾ ಕಾರ್ಯದರ್ಶಿ ಗಬ್ಬಾಡಿ ಕಾಡೆಗೌಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT