ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಂಘರ್ಷ

Published 27 ಏಪ್ರಿಲ್ 2024, 6:42 IST
Last Updated 27 ಏಪ್ರಿಲ್ 2024, 6:42 IST
ಅಕ್ಷರ ಗಾತ್ರ

ರಾಮನಗರ: ಚನ್ನಪಟ್ಟಣ ತಾಲೂಕಿನ ಇಗ್ಗಲೂರು ಗ್ರಾಮದಲ್ಲಿ ಮತದಾನ ಕೇಂದ್ರಕ್ಕೆ ಮತದಾರರನ್ನು ಕರೆದುಕೊಂಡು ಹೋಗುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು ಕಾಂಗ್ರೆಸ್ ಕಾರ್ಯಕರ್ತನ ಕೈ ಮುರಿದಿರುವ ಪ್ರಸಂಗ ನಡೆದಿದೆ.

ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ಗಿರಿ ಎಂಬುವರ ಕೈ ಮುರಿದಿದ್ದು, ವೃದ್ಧರೊಬ್ಬರನ್ನು ಮತದಾನ ಮಾಡಿಸಲು ಕರೆದುಕೊಂಡು ಹೋಗುತ್ತಿದ್ದಾಗ ಬಿಜೆಪಿ ಕಾರ್ಯಕರ್ತರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವಿಚಾರಕ್ಕೆ ಎರಡೂ ಪಕ್ಷದವರು ನಡುವೆ ವಾಗ್ವಾದ ನಡೆದು ಕೈಕೈ ಮಿಲಾಯಿಸಿದ್ದಾರೆ. ಈ ಸಮಯದಲ್ಲಿ ಗಿರಿಗೆ ಕೈ ಮುರಿದಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ತಾಲ್ಲೂಕಿನ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT