ಭಾನುವಾರ, ಸೆಪ್ಟೆಂಬರ್ 26, 2021
24 °C

ರಚಿತಾ ರಾಮ್-ಅಜಯ್ ರಾವ್ ಸಿನಿಮಾ ಶೂಟಿಂಗ್ ವೇಳೆ ವಿದ್ಯುತ್‌ ಸ್ಪರ್ಶ; ಫೈಟರ್ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ; ತಾಲ್ಲೂಕಿನ ಬಿಡದಿ ಹೋಬಳಿಯ ಜೋಗರದೊಡ್ಡಿಯಲ್ಲಿ ಸೋಮವಾರ 'ರಚ್ಚು ಐ‌‌ ಲವ್ ಯೂ' ಸಿನಿಮಾ ಚಿತ್ರೀಕರಣದ ವೇಳೆ ವಿದ್ಯುತ್ ಸ್ಪರ್ಶಿಸಿ ಫೈಟರ್ ವಿವೇಕ್ ಎಂಬುವರು‌ ಮೃತಪಟ್ಟರು.

ನಟ ಅಜಯ್ ರಾವ್ ಹಾಗೂ  ನಟಿ ರಚಿತಾ ರಾಮ್ ಅಭಿನಯದ ಚಿತ್ರದ ಚಿತ್ರೀಕರಣ ಇಲ್ಲಿ ನಡೆದಿತ್ತು.‌ ವೈಯರ್ ಎಳೆಯುವ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಇಬ್ಬರು ಸಿಬ್ಬಂದಿ ಗಾಯಗೊಂಡರು. ಅದರಲ್ಲಿ ಒಬ್ಬರು ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟರು.

ಘಟನೆ‌ ಬಳಿಕ ಚಿತ್ರೀಕರಣ ಸ್ಥಗಿತಗೊಂಡಿದೆ. ಗಾಯಾಳುವನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಕ್ರೇನ್ ಬಳಸಿ ಚಿತ್ರೀಕರಣ ನಡೆದಿತ್ತು. ಈ ವೇಳೆ ಕ್ರೇನ್ ಗೆ 11 ಕೆ.ವಿ. ಸಾಮರ್ಥ್ಯ ದ ವಿದ್ಯುತ್ ತಂತಿ ತಗುಲಿ ಅವಘಡ ಸಂಭವಿಸಿತು. ಘಟನೆ ಸಂದರ್ಭ ನಟ ಅಜಯ್ ರಾವ್ ಸ್ಥಳದಲ್ಲಿದ್ದರು. ನಾಯಕಿ ರಚಿತಾ ರಾಮ್ ಇರಲಿಲ್ಲ ಎಂದು ಪೊಲೀಸರು‌ ಮಾಹಿತಿ ನೀಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು