ರಾಮನಗರ: ಸಾರ್ವಜನಿಕರಲ್ಲಿ ಬ್ಯಾಂಕಿಂಗ್ ವ್ಯವಹಾರ ಹಾಗೂ ಆರ್ಥಿಕ ಶಿಸ್ತಿನ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಫೆ. 9ರಿಂದ 13ರವರೆಗೆ ಜಿಲ್ಲೆಯಾದ್ಯಂತ 5 ದಿನಗಳ ಆರ್ಥಿಕ ಸಾಕ್ಷರತಾ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಹಣಕಾಸು ಸೇವೆಗಳ ಇಲಾಖೆ, ಭಾರತೀಯ ರಿಸರ್ವ್ ಬ್ಯಾಂಕ್ ಹಾಗೂ ಜಿಲ್ಲಾ ಪಂಚಾಯಿತಿ ನಿರ್ದೇಶನದಂತೆ ಬೆಂಗಳೂರು ದಕ್ಷಿಣ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.

9ರಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನ್ಮೋಲ್ ಜೈನ್ ಅವರು ಸಪ್ತಾಹದ ಪೋಸ್ಟರ್ಗಳನ್ನು ಬಿಡುಗಡೆ ಮಾಡುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಜಿಲ್ಲೆಯಾದ್ಯಂತ 100 ಬ್ಯಾಂಕ್ ಶಾಖೆಗಳಲ್ಲಿ ಆರ್ಥಿಕ ಸಾಕ್ಷರತಾ ಸಪ್ತಾಹದ ಅಂಗವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಕೆವೈಸಿ (ನೋ ಯುವರ್ ಕಸ್ಟಮರ್) ನಿಮ್ಮ ಗ್ರಾಹಕರನ್ನು ತಿಳಿಯಿರಿ ಎನ್ನುವುದು ಈ ಆರ್ಥಿಕ ಸಪ್ತಾಹದ ವಿಷಯವಾಗಿದೆ. ಪ್ರಾಮುಖ್ಯತೆ ಹಾಗೂ ಒವಿಡಿ ಅಧಿಕೃತವಾಗಿ ಮಾನ್ಯವಾದ ದಾಖಲಾತಿಗಳ ಬಗ್ಗೆ ವಿಚಾರಗಳು, ಮರು ಕೆವೈಸಿ, ವಿಡಿಯೊ ಕೆವೈಸಿ, ಸೆಂಟ್ರಲ್ ಕೆವೈಸಿ, ಆಧಾರ್ ಓಟಿಪಿ ಹೀಗೆ ಹಲವಾರು ಬ್ಯಾಂಕಿನ ವಿಷಯಗಳ ಬಗ್ಗೆ ಮಾಹಿತಿಯನ್ನು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಣಕಾಸು ಸಾಕ್ಷರತಾ ಕೇಂದ್ರಗಳು ಹಾಗೂ ಸಿಎಫ್ಎಲ್ಸಿಗಳು, ಬ್ಯಾಂಕಿನ ವ್ಯವಹಾರ ಪ್ರತಿನಿಧಿಗಳು ಹಾಗೂ ಬ್ಯಾಂಕಿನ ಶಾಖೆಗಳು ಶಿಬಿರವನ್ನು ಏರ್ಪಡಿಸುವ ಮೂಲಕ ಪ್ರಚಾರ ನೀಡಲಿದ್ದಾರೆ ಎಂದು ಜಿಲ್ಲಾ ಮಾರ್ಗದರ್ಶಿ ಬ್ಯಾಂಕಿನ ಮುಖ್ಯ ಪ್ರಬಂಧಕ ಮೋಹನ್ ಕುಮಾರ್ ವೈ.ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.