ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌‌ರಾಮನಗರ | ಅವಹೇಳನಕಾರಿ ಪೋಸ್ಟ್: ಪ್ರಕರಣ ದಾಖಲು

Published 16 ಏಪ್ರಿಲ್ 2024, 5:36 IST
Last Updated 16 ಏಪ್ರಿಲ್ 2024, 5:36 IST
ಅಕ್ಷರ ಗಾತ್ರ

‌‌ರಾಮನಗರ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ವಿರುದ್ಧ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವುದರ ವಿರುದ್ಧ, ಇಲ್ಲಿನ ಸೈಬರ್ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

‘ಬಡವ ಬಂಧು ಡಾ. ಮಂಜುನಾಥ್’ ಎಂಬ ಹೆಸರಿನಲ್ಲಿ ಅವರ ಫೋಟೊದೊಂದಿಗೆ ಫೇಸ್‌ಬುಕ್ ಖಾತೆಯಲ್ಲಿ ತೆರೆದಿರುವ ದುಷ್ಕರ್ಮಿಗಳು, ಸಹೋದರರ ಕುರಿತು ಅವಹೇಳನಕಾರಿ ಸಂದೇಶದೊಂದಿಗೆ ಪೋಸ್ಟ್ ಮಾಡಿದ್ದಾರೆ. ಸಹೋದರರು ರೌಡಿಗಳು, ಕೊತ್ವಾಲ್ ಶಿಷ್ಯರು ಎಂದಲ್ಲಾ ಬರೆದಿರುವ ದುಷ್ಕರ್ಮಿಗಳು ಬಿಜೆಪಿ–ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಯಾರದ್ದೊ ಗಾಯಾಳುಗಳ ಚಿತ್ರ ಹಾಕಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಮತದಾರರಲ್ಲಿ ಭಯ ಉಂಟುಮಾಡುತ್ತಿದ್ದಾರೆ ಎಂದೆಲ್ಲಾ ಪೋಸ್ಟ್‌ನಲ್ಲಿ ನಮೂದಿಸಲಾಗಿದೆ.

ಪೋಸ್ಟ್ ಕುರಿತು ಸಬ್ ಇನ್‌ಸ್ಪೆಕ್ಟರ್ ಜಾರ್ಜ್ ಪ್ರಕಾಶ್ ಅವರು ನೀಡಿದ ದೂರಿನ ಮೇರೆಗೆ, ಏಪ್ರಿಲ್ 13ರಂದು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT