ಹಾರೋಹಳ್ಳಿ (ಕನಕಪುರ): ತಾಲ್ಲೂಕಿನ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಸ್ನೇಹ ಇಂಡಸ್ಟ್ರೀಸ್‌ನಲ್ಲಿ ಬುಧವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಕಾರ್ಮಿಕರು ಗಾಯಗೊಂಡಿದ್ದಾರೆ.

ಮಂಡ್ಯ ಜಿಲ್ಲೆಯ ಕೊಪ್ಪ ಗ್ರಾಮದ ಮಾಸ್ತೀಗೌಡ ಎಂಬುವರಿಗೆ ಸೇರಿದ ಕಾರ್ಖಾನೆಯಾಗಿದೆ. ಇದೇ ಗ್ರಾಮದ ರಾಜೇಶ್, ಶಿಲ್ಪ, ಕುಮಾರ್ ಎಂಬುವರು ಇದೇ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು ಬೆಂಕಿ ಅವಘಡದಲ್ಲಿ ಗಾಯಗೊಂಡವರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಗಾಯಗೊಂಡವರನ್ನು ಕಂಪನಿಯ ಮಾಲೀಕರೆ ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಕೈಗಾರಿಕಾ ಪ್ರದೇಶದಲ್ಲಿ ಚಿಕ್ಕದಾಗಿ ನಿರ್ಮಿಸಿರುವ ಕೊಠಡಿಯಲ್ಲಿ ಸೋಡಿಯಂ ಮೆಟಲ್ ಶೀಟ್ ತುಂಡರಿಸುವ ವೇಳೆ ಅದರ ಮೇಲೆ ನೀರು ಬಿದ್ದು ಬೆಂಕಿ ಹತ್ತಿಕೊಂಡಿರುಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಸಂಜೆ ಆಪರೇಟರ್ ರಾಜೇಶ್ ಸೋಡಿಯಂ ಮೆಟಲ್ ಶೀಟ್ ತುಂಡರಿಸುವಾಗ ಬೆವರಿನ ಹನಿ ಬಿದ್ದು ಬೆಂಕಿ ಹತ್ತಿಕೊಂಡಿರಬಹುದು ಎಂದು ಅವರು ಶಂಕಿಸಿದ್ದಾರೆ.

ಮಾಹಿತಿ ತಿಳಿದ ತಕ್ಷಣ ಹಾರೋಹಳ್ಳಿ ಸಬ್ ಇನ್‌ಸ್ಪೆಕ್ಟರ್ ಧರ್ಮೇಗೌಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಗಾಯಾಳುಗಳನ್ನು ಕಂಪನಿಯ ಮಾಲೀಕರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಗಾಯಗೊಂಡವರಿಂದ ಅಥವಾ ಕಂಪನಿ ಮಾಲೀಕರಿಂದ ದೂರು ಬಂದ ಮೇಲೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಧರ್ಮೇಗೌಡ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.